ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಕಲ್ಯಾಣ : ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಆತ್ಮಹತ್ಯೆ

ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ಗ್ರಾಮ ಆಡಳಿತ ಅಧಿಕಾರಿ ಮಹಾದೇವ (28) ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ. ಬಾಗಿಲಿಗೆ ಬೀಗ ಹಾಕಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ. ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮಹಾದೇವ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಸೇರಿ ಒಂದು ವರ್ಷವಷ್ಟೇ ಆಗಿದೆ. ಕೆಲಸದ ಒತ್ತಡದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ.
ಮಂಠಾಳ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಮೃತದೇಹ ಮರಣೋತ್ತರ ಪರೀಕ್ಷೆಗೆ ಬಸವಕಲ್ಯಾಣ ಸಾರ್ವಜನಿಕ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವರದಿ: ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!