ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಸವಕಲ್ಯಾಣ : ಮೇಲಾಧಿಕಾರಿಗಳ ಕಿರುಕುಳದಿಂದ ಬೇಸತ್ತು ಗ್ರಾಮ ಆಡಳಿತ ಅಧಿಕಾರಿ ಮಹಾದೇವ ಆತ್ಮಹತ್ಯೆ

ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕಾಂಬಳೆವಾಡಿ ಗ್ರಾಮದ ನಿವಾಸಿ, ಗ್ರಾಮ ಆಡಳಿತ ಅಧಿಕಾರಿ ಮಹಾದೇವ ವಯಸ್ಸು 27 ಇವರು ಬುಧವಾರ ಸಂಜೆ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬಸವಕಲ್ಯಾಣ ತಾಲೂಕಿನ ಹಳ್ಳಿ ಗ್ರಾಮ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಬೆಳಗ್ಗೆ ಕೆಲಸಕ್ಕೆ ತೆರಳಿ ಮಧ್ಯಾಹ್ನ 4 ಗಂಟೆ ಸುಮಾರಿಗೆ ಮನೆಗೆ ಬಂದಿದ್ದಾರೆ. ಬಾಗಿಲಿಗೆ ಬೀಗ ಹಾಕಿ ನೇಣಿಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಮನನೊಂದ ದುಃಖತಪ್ತ ವೃದ್ಧ ತಾಯಿ ಹಾಗೂ ಕುಟುಂಬಸ್ಥರು ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಈ ನಿರ್ಧಾರ ಕೈಗೊಂಡಿದ್ದಾನೆ ಎಂದು ಆರೋಪಿಸಿದರು.

ನಿನ್ನೆ ಸಾಯಂಕಾಲ ಈ ಘಟನೆ ನಡೆದರೂ ಸಹ ತಾಲ್ಲೂಕಿನ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ… ಇದರಿಂದ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಯಿತು..

ಇದನ್ನು ಅರಿತ ತಾಲೂಕ ದಂಡಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ಸ್ಥಳಕ್ಕೆ ಪೊಲೀಸರೊಂದಿಗೆ ದೌಡಾಯಿಸಿ ಮೃತರಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬಸ್ಥರಿಗೆ ಸಾಂತ್ವಾನ ಹೇಳಿದರು..

ಆದರೆ ಗ್ರಾಮಸ್ಥರು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ನ್ಯಾಯ ಒದಗಿಸುವವರೆಗೆ ಅಂತಿಮ ಸಂಸ್ಕಾರ ಮಾಡುವುದಿಲ್ಲವೆಂದು ಪಟ್ಟು ಹಿಡಿದರು. ತದ ನಂತರ ಜಿಲ್ಲಾಧಿಕಾರಿಗಳು ಕರೆ ಮಾಡಿ ಮಾತಾಡಿ ತನಿಖೆ ಮುಂದುವರೆಸುವುದಾಗಿ ಭರವಸೆ ನೀಡಿದರು.
ಸ್ಥಳಕ್ಕೆ ಬಸವಕಲ್ಯಾಣ ಶಾಸಕ ಶರಣು ಸಲಗರ ಅವರು ಬಂದು ಪರಿಸ್ಥಿತಿ ತಿಳಿಗೊಳಿಸಿದರು.

ವರದಿ :ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!