ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸರ್ಕಾರಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ.

ಕೊರಟಗೆರೆ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ತಾಲೂಕಿನ ತಾಣ್ಣೇನಹಳ್ಳಿ ಸರ್ಕಾರಿ ಶಾಲೆಯ ಆವರಣದಲ್ಲಿ ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.

ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು ಹಾಗೂ ಕೊರಟಗೆರೆ ತಾಲೂಕು ಬಿಜೆಪಿ ಮಂಡಲ ಉಪಾಧ್ಯಕ್ಷರಾದ ಕೆ.ಟಿ. ಗೋವಿಂದರೆಡ್ಡಿ ಅವರು ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಯ ಮಹತ್ವವನ್ನು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಪರಿಸರ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆಯ ಜವಾಬ್ದಾರಿಯನ್ನು ವಹಿಸಿಕೊಳ್ಳಬೇಕು ಎಂದು ಕರೆ ನೀಡಿದರು. ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಪರಿಸರ ಮಾಲಿನ್ಯ ಹಾಗೂ ಹವಾಮಾನ ವೈಪರೀತ್ಯಗಳನ್ನು ತಡೆಗಟ್ಟಲು ಮರಗಳ ಸಂರಕ್ಷಣೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಶಾಲಾ ಆವರಣದಲ್ಲಿ ವಿವಿಧ ಜಾತಿಯ ಸಸಿಗಳನ್ನು ನೆಡಲಾಗಿದ್ದು, ಅವುಗಳ ನಿರ್ವಹಣೆ ಹಾಗೂ ಸಂರಕ್ಷಣೆಗೆ ವಿದ್ಯಾರ್ಥಿಗಳಿಗೆ ಜವಾಬ್ದಾರಿಗಳನ್ನು ವಹಿಸಲಾಯಿತು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ನಡೆದ ಈ ಕಾರ್ಯಕ್ರಮ ಗ್ರಾಮದಲ್ಲಿ ಪರಿಸರ ಜಾಗೃತಿ ಮೂಡಿಸುವಲ್ಲಿ ಮಹತ್ವದ ಹೆಜ್ಜೆಯಾಗಿ ಪರಿಣಮಿಸಿತು.

ಇದೇ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಮಂಜುನಾಥ್, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರಾದ ಹನುಮಂತರಾಜು, ಕಾಂತರಾಜು, ಜೈಪಾಲ್, ವೈದ್ಯರಾದ ನಂದಿನಿ, ಮಾಜಿ ಗ್ರಾಮ ಪಂಚಾಯತಿ ಸದಸ್ಯರಾದ ಶಿಲ್ಪ ರಮೇಶ್, ಆಶಾ ಕಾರ್ಯಕರ್ತೆ ಲಕ್ಷ್ಮಿ, ಡಿ ಆರ್ ಪಿ ಶಿವಣ್ಣ ಸೇರಿದಂತೆ ಶಾಲಾ ಶಿಕ್ಷಕರು, ಧರ್ಮಸ್ಥಳ ಗ್ರಾಮೀಣ ಅಭಿವೃದ್ಧಿ ಯೋಜನೆಯ ಸದಸ್ಯರು, ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಪರಿಸರ ಸಂರಕ್ಷಣೆಯ ಸಂಕಲ್ಪ ಮಾಡಿದರು.

ವರದಿ. ಪ್ರಸನ್ನಕುಮಾರ್. ಎಸ್. ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!