ಸಿರುಗುಪ್ಪ – ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಸೊಳ್ಳೆಗಳಿಂದ ಹರಡುವ ಮಾರಕ ರೋಗಗಳ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಮಲೇರಿಯಾ ಡೆಂಗಿ ಜ್ವರ ಚಿಕನ್ ಗುನ್ಯಾ, ಮೆದುಳು ಜ್ವರ, ಆನೆಕಾಲ ರೋಗ ಸೊಳ್ಳೆಗಳ ಸಂತಾನೋತ್ಪತ್ತಿ ತಾಣಗಳ ನಾಶ ರಕ್ಷಣಾ ಕ್ರಮ ಕುರಿತು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ಆರೋಗ್ಯ ಶಿಕ್ಷಣ ನೀಡಿದರು.
ನಂತರ ಕಾಲೇಜಿನ ನೀರಿನ ತಾಣಗಳು ಆವರಣಗಳಲ್ಲಿನ ಘನ ತ್ಯಾಜ್ಯಗಳ ವೀಕ್ಷಣೆ ಲಾರ್ವಾ ಕಂಡುಬಂದ ತಾಣಗಳ ಸೂಕ್ತ ವಿಲೇವಾರಿ ಬಗ್ಗೆ ವಿದ್ಯಾರ್ಥಿಗಳಿಗೆ ಉಪನ್ಯಾಸಕ ಹುಲಿರಾಜ ರವರ ನೇತೃತ್ವದಲ್ಲಿ ಮಾರ್ಗದರ್ಶನ ನೀಡಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀ ನಾಗರಾಜ್ ತಮ್ಮ ಮನೆಯ ಸುತ್ತಮುತ್ತಲಿನ ಸ್ಥಳವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಗೊಳಿಸಿ ಎಂದು ಸಲಹೆ ನೀಡಿದರು.
ಉಪನ್ಯಾಸಕ ಸೋಮಶೇಖರ್ ರೆಡ್ಡಿ ಹುಲಿರಾಜ ಮತ್ತು ಮಲೇರಿಯಾ ಮೇಲ್ವಿಚಾರಕ ಶ್ರೀನಿವಾಸ್ ಗಣೇಶ್ ಮತ್ತು ವಿದ್ಯಾರ್ಥಿ ಸಮೂಹ ಹಾಜರಿದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್




















