ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಿಜಾಬಗೆ ಶಾಲಾ ಕಾಲೇಜುಗಳಲ್ಲಿ ಅನುಮತಿ. ವಿಜಯಪುರದಲ್ಲಿ ಯತ್ನಾಳ ವಿರೋಧ

ಕೇಸರಿ ಶಾಲು ವಿತರಣೆಗೆ ಯತ್ನ: ಯತ್ನಾಳ್‌ ಬಂಧನ

ವಿಜಯಪುರ :ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ರಾಜ್ಯ ಸರಕಾರ ಅನುಮತಿ ನೀಡಿರುವುದನ್ನು ವಿರೋಧಿಸಿ, ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಯತ್ನಿಸಿದ ನಗರ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಅವರ ಬೆಂಬಲಿಗರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದಿದ್ದಾರೆ.

ಸರಕಾರದ ನಿರ್ಧಾರವನ್ನು ಖಂಡಿಸಿ ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ಅವರ ಬೆಂಬಲಿಗರು ಬೆಳಗ್ಗೆ ನಗರದ ದರ್ಬಾ‌ರ್ ಹೈಸ್ಕೂಲ್ ಮತ್ತು ಕಾಲೇಜು ಆವರಣದ ಬಳಿ ಕೇಸರಿ ಶಾಲುಗಳೊಂದಿಗೆ ಜಮಾಯಿಸಿದ್ದರು.

ವಿದ್ಯಾರ್ಥಿಗಳಿಗೆ ಶಾಲು ಹಂಚಲು ಸಿದ್ಧತೆ ನಡೆಸುತ್ತಿದ್ದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಪೊಲೀಸರು ತಡೆದರು. ಈ ಸಂದರ್ಭದಲ್ಲಿ ಪೊಲೀಸರು ಮತ್ತು ಬೆಂಬಲಿಗರ ನಡುವೆ ವಾಗ್ವಾದ ನಡೆಯಿತು.

ಸ್ಥಳಕ್ಕೆ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್ ಆಗಮಿಸಿ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಿಸಲು ಮುಂದಾದಾಗ ಪೊಲೀಸರು, ಶಾಸಕರು ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದರು. ಇದರಿಂದ ಆಕ್ರೋಶಗೊಂಡ ಬೆಂಬಲಿಗರು ಪೊಲೀಸ್ ವಾಹನಕ್ಕೆ ಅಡ್ಡ ಕುಳಿತು ಪ್ರತಿಭಟಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ. ಲಕ್ಷ್ಮಣ ನಿಂಬರಗಿ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.ವಶಕ್ಕೆ ಪಡೆದಿದ್ದ ಯತ್ನಾಳ್ ಮತ್ತು ಬೆಂಬಲಿಗರನ್ನು ನಂತರ ಬಿಡುಗಡೆ ಮಾಡಲಾಯಿತು.

ನಿರ್ಧಾರ ಮರುಪರಿಶೀಲನೆಗೆ ಯತ್ನಾಳ್ ಆಗ್ರಹ :

ಬಿಡುಗಡೆಯಾದ ಬಳಿಕ ರಾಜ್ಯ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ ಶಾಸಕ ಯತ್ನಾಳ್, ಹಿಜಾಬ್‌ಗೆ ನೀಡಿರುವ ಅನುಮತಿಯನ್ನು ಸರಕಾರ ತಕ್ಷಣವೇ ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿದರು.

ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅನುಮತಿ ನೀಡಿರುವ ರಾಜ್ಯ ಸರ್ಕಾರದ ಅಲ್ಪಸಂಖ್ಯಾತ ಓಲೈಕೆ ನೀತಿಯನ್ನು ಖಂಡಿಸಿ ಹಾಗೂ ಎಲ್ಲರಿಗೂ ಸಮಾನ ನೀತಿ, ಸಮಾನ ನ್ಯಾಯವನ್ನು ಕಲ್ಪಿಸುವ ನಿಟ್ಟಿನಲ್ಲಿ ಇಂದು ವಿಜಯಪುರ ನಗರದ ದರಬಾರ ಕಾಲೇಜು ಹತ್ತಿರ ಹಮ್ಮಿಕೊಂಡಿದ್ದ ಕಾಲೇಜು ವಿದ್ಯಾರ್ಥಿಗಳಿಗೆ ಕೇಸರಿ ಶಾಲು ವಿತರಣೆಗೆ ಪೊಲೀಸರ ಮೂಲಕ ಅವಕಾಶ ನೀಡದೆ ನನ್ನನ್ನು ಸೇರಿದಂತೆ ಹಿಂದೂ ಕಾರ್ಯಕರ್ತರನ್ನು ಬಂಧಿಸಿ, ಹಿಂದೂ ವಿರೋಧಿ ನೀತಿ ತಾಳಿರುವ ತುಘಲಕ್ ಸರ್ಕಾರದ ನಡೆ ಖಂಡನೀಯ. ಹಿಜಾಬ್ ಅನುಮತಿ ಹಿಂಪಡೆಯುವವರೆಗೂ ಹೋರಾಟ ನಿಲ್ಲದು. ನಮ್ಮ ಹಿಂದೂ ವಿದ್ಯಾರ್ಥಿಗಳು ಸ್ವಯಂ ಪ್ರೇರಿತವಾಗಿ ಕೇಸರಿ ಶಾಲು ಹಾಕಿಕೊಂಡೆ ಕಾಲೇಜಿಗೆ ಹೋಗುವಂತೆ ಕರೆ ನೀಡುವೆ.

  • ಶಾಸಕ ಬಸನಗೌಡ ಪಾಟೀಲ ಯತ್ನಾಳ.
  • ಕರುನಾಡ ಕಂದ ಸುದ್ದಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!