ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ: ಎಸ್ ಆರ್ ಗೋಲಗುಂಡ

ಹುನಗುಂದ : ಪರಿಸರವು ನಮ್ಮ ಜೀವನದ ಆಧಾರವಾಗಿದೆ. ಗಾಳಿ, ನೀರು, ಮಣ್ಣು, ಮರಗಳು ಹಾಗೂ ಪ್ರಾಣಿ-ಪಕ್ಷಿಗಳು ಪರಿಸರದ ಅವಿಭಾಜ್ಯ ಅಂಗಗಳಾಗಿವೆ. ಆದರೆ ಇತ್ತೀಚಿನ ದಿನಗಳಲ್ಲಿ ಅರಣ್ಯ ನಾಶ, ಮಾಲಿನ್ಯ, ಪ್ಲಾಸ್ಟಿಕ್ ಬಳಕೆ ಹಾಗೂ ಕೈಗಾರಿಕಾ ಅಭಿವೃದ್ಧಿಯಿಂದ ಪರಿಸರಕ್ಕೆ ಹಾನಿಯಾಗುತ್ತಿದೆ. ಎಂದು ವಿ ಎಂ ಎಸ್ ಆರ್ ವಿ ಕಾಲೇಜಿನ , ಪ್ರಾಚಾರ್ಯ ಎಸ್ ಆರ್ ಗೋಲಗುಂಡ ಹೇಳಿದರು.
. ವಿ ಎಂ.ಕೆ.ಎಸ್.ಆರ್.ವಸ್ತ್ರದ ಕಲಾ ವಿಜ್ಞಾನ ಹಾಗೂ ವಿ. ಎಸ್. ಬೆಳ್ಳಿಹಾಳ ವಾಣಿಜ್ಯ ಮಹಾವಿದ್ಯಾಲಯ ಹುನಗುಂದದ ಎನ್.ಎಸ್ .ಎಸ್‌ ಘಟಕದ ಆಶ್ರಯದಲ್ಲಿ ಆಯೋಜಿಸಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದರ ಪರಿಣಾಮವಾಗಿ ಜಾಗತಿಕ ತಾಪಮಾನ ಏರಿಕೆ, ಹವಾಮಾನ ಬದಲಾವಣೆ, ನೀರಿನ ಕೊರತೆ ಮುಂತಾದ ಸಮಸ್ಯೆಗಳು ಹೆಚ್ಚುತ್ತಿವೆ. ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಹೆಚ್ಚು ಮರಗಳನ್ನು ನೆಡಬೇಕು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡಬೇಕು, ನೀರು ಮತ್ತು ವಿದ್ಯುತ್ ವ್ಯರ್ಥವಾಗದಂತೆ ನೋಡಿಕೊಳ್ಳಬೇಕು. ಸ್ವಚ್ಛ ಪರಿಸರವನ್ನು ಕಾಪಾಡುವ ಮೂಲಕ ಮುಂದಿನ ಪೀಳಿಗೆಗೆ ಉತ್ತಮ ಭವಿಷ್ಯವನ್ನು ನೀಡಬಹುದು. ವಿದ್ಯಾರ್ಥಿಗಳಾದ ನೀವು ಪರಿಸರ ಸಂರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು. ನಿಮ್ಮ ಮನೆ, ಶಾಲೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸ್ವಚ್ಛತೆಯನ್ನು ಕಾಪಾಡಿ, ಇತರರಲ್ಲಿಯೂ ಪರಿಸರದ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಹೇಳಿದರು.
ವಿ ಎಂ ಮಹಾವಿದ್ಯಾಲಯದ ಐಕ್ಯೂಎಸಿ ಸಂಚಾಲಕ ಡಾ.ಎಲ್.ಎನ್.ಕುಲಕರ್ಣಿ ಮಾತನಾಡುತ್ತಾ ಪರಿಸರವು ನಮ್ಮ ಜೀವನದ ಜೀವನಾಡಿಯಾಗಿದೆ. ಸ್ವಚ್ಛ ಗಾಳಿ, ಶುದ್ಧ ನೀರು, ಹಸಿರು ವನಸಿರಿ ಮತ್ತು ಸಮತೋಲನದ ಪ್ರಕೃತಿ ನಮ್ಮ ಆರೋಗ್ಯಕರ ಬದುಕಿಗೆ ಅತ್ಯಗತ್ಯವಾಗಿದೆ ಎಂದರು.
ಕಾರ್ಯಕ್ರಮದ ಪೂರ್ವದಲ್ಲಿ ವಿದ್ಯಾರ್ಥಿಗಳು ಮತ್ತು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಮಹಾವಿದ್ಯಾಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಕ್ರೀಡಾ ನಿರ್ದೇಶಕ ಪ್ರೊ.ಎಸ್.ಬಿ.ಚಳಗೇರಿ ಮಾತನಾಡುತ್ತಾ ಇತ್ತೀಚಿನ ದಿನಗಳಲ್ಲಿ ಪರಿಸರ ಮಾಲಿನ್ಯ, ಅರಣ್ಯನಾಶ ಮತ್ತು ಹವಾಮಾನ ಬದಲಾವಣೆಗಳು ವಿಶ್ವದಾದ್ಯಂತ ಗಂಭೀರ ಸಮಸ್ಯೆಗಳಾಗಿ ಪರಿಣಮಿಸಿವೆ. ಈ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತಿಯೊಬ್ಬರೂ ಪರಿಸರ ಸಂರಕ್ಷಣೆಯ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಬೇಕು. ಮರಗಳನ್ನು ನೆಡುವುದು, ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು, ನೀರನ್ನು ಮಿತವಾಗಿ ಬಳಸುವುದು ಹಾಗೂ ಸ್ವಚ್ಛತೆಯನ್ನು ಕಾಪಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ವಿಶೇಷವಾಗಿ ವಿದ್ಯಾರ್ಥಿಗಳು ಪರಿಸರ ಸ್ನೇಹಿ ಚಟುವಟಿಕೆಗಳಲ್ಲಿ ಭಾಗವಹಿಸಿ ಸಮಾಜಕ್ಕೆ ಮಾದರಿಯಾಗಬೇಕು ಎಂದು ಹೇಳಿದರು.
ಉಪನ್ಯಾಸಕ ಡಾ. ತಿಪ್ಪೇಸ್ವಾಮಿ ಡಿ.ಎಸ್. ಮಾತನಾಡುತ್ತ ವಿಶ್ವ ಪರಿಸರ ದಿನಾಚರಣೆಯನ್ನು ಶಾಲೆಗಳಲ್ಲಿ ಆಚರಿಸುವುದರಿಂದ ಮಕ್ಕಳಲ್ಲಿ ಪರಿಸರದ ಬಗ್ಗೆ ಜಾಗೃತಿ, ಜವಾಬ್ದಾರಿ ಮತ್ತು ಸಂರಕ್ಷಣಾ ಮನೋಭಾವ ಬೆಳೆದು, ಹಸಿರು ಹಾಗೂ ಆರೋಗ್ಯಕರ ಭವಿಷ್ಯ ನಿರ್ಮಾಣಕ್ಕೆ ಸಹಕಾರಿಯಾಗುತ್ತದೆ ಪ್ರತಿಯೊಬ್ಬರಲ್ಲಿಯೂ ಸಾಲುಮರದ ತಿಮ್ಮಕ್ಕಳಂತೆ ಪರಿಸರದ ಬಗ್ಗೆ ಅಭಿಮಾನ ಮೂಡಿದಾಗ ಮಾತ್ರ ಇಂತಹ ದಿನಾಚರಣೆಗಳು ಸಾರ್ಥಕ ಎಂದರು. ಎನ್.ಎಸ್.ಎಸ್. ಕಾರ್ಯಕ್ರಮಾಧಿಕಾರಿ ಡಾ.ಎಸ್.ಆರ್.ನಾಗಣ್ಣವರ ಮಾತನಾಡುತ್ತಾ ಪರಿಸರದ ರಕ್ಷಣೆಯ ಅರಿವು ಮನೆಯಿಂದಲೇ ಆರಂಭವಾಗಬೇಕು ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಿಕೊಂಡರೆ ಇತರರಲ್ಲಿಯೂ ರಕ್ಷಣೆಯ ಜಾಗೃತಿ ಮೂಡುವುದು ಜೂನ 5 ರಂದು ಒಂದು ಗಿಡನೆಟ್ಟು ನೀರು ಹಾಕಿದರೆ ಸಾಲದು ನೆಟ್ಟಿರುವ ಸಸಿಯನ್ನು ಗಿಡವಾಗಿ ಬೆಳೆಯುವವರೆಗೂ ಕಾಪಾಡಬೇಕು ಎಂದರು. ಎನ್.ಎಸ್.ಎಸ್. ಸ್ವಯಂಸೇವಕ ಅಭಿಷೇಕ ಹುನಸಿಗಿಡದ ವಂದಿಸಿದರು. ವಾಹಿದ್ ಕಡಿವಾಲ ನಿರೂಪಿಸಿದರು.

ಕರುನಾಡ ಕಂದ ಸುದ್ದಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!