ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಪ್ರತ್ಯೇಕ ಎರಡು ಪ್ರಕರಣ ದಾಖಲು

ಬಳ್ಳಾರಿ : ಈಚೆಗೆ ಹಸುವಿನ ತಲೆ ಪತ್ತೆಯಾದ ಘಟನೆ ಹಾಗೂ ವಿಷಯವನ್ನಿಟ್ಟುಕೊಂಡು ಪಶು ಆಸ್ಪತ್ರೆ ಬಳಿ ರಸ್ತೆ ತಡೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಸೃಷ್ಠಿಸಿದ ಸಂಬಂಧ ಪ್ರತ್ಯೇಕ ಠಾಣೆಗಳಲ್ಲಿ, ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಿಜೆಪಿ ಘಟಕದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ ನಾಯ್ಡು, ಮುಖಂಡರಾದ ಶ್ರೀನಿವಾಸ್ ಮೋತ್ಕರ್, ಗುರಂ ವೆಂಕಟರಮಣ, ಮಾರುತಿ ಪ್ರಸಾದ್, ಅರ್ಜುನ್ ಸಿಂಗ, ಗೋವಿಂದ, ಮಂಜು, ಕೇಶವ, ಸುಗುಣ, ಭಾಗ್ಯಲಕ್ಷ್ಮೀ, ಸೋಮು ಎಂಬುವರರ ಸೇರಿ ಒಟ್ಟು ಹನ್ನೊಂದು ಜನರ ವಿರುದ್ಧ ಬ್ರೂಸ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಸುಗಳ ತಲೆ ಪತ್ತೆಯಾದ ಹಿನ್ನೆಲೆ, ಕಳೇಬರೆ ಪರಿಶೀಲನೆ ಪ್ರಕ್ರಿಯೆ ಮುಗಿದ ನಂತರ ಅವುಗಳನ್ನು ತಮಗೆ ನೀಡಬೇಕು ಎಂದು ಒತ್ತಾಯಿಸಿ, ಹಿಂದೂ ಸಂಘಟನೆಗಳು ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಕಾನೂನು ಬಾಹಿರವಾಗಿ ಜಾನುವಾರುಗಳ ತಲೆಗಳನ್ನು ನೀಡಲು ಸಾಧ್ಯವಿಲ್ಲವೆಂದು ತಿಳಿಸಿದರೂ ಪ್ರತಿಭಟನಾಕಾರರು ಯಾವುದೇ ಮುನ್ಸೂಚನೆ ಅಥವಾ ಅನುಮತಿ ಪಡೆಯದೆ ಏಕಾಏಕಿ ರಸ್ತೆಯ ಮೇಲೆ ಕುಳಿತು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆಯಿಂದಾಗಿ ಸಂಚಾರಕ್ಕೆ ತೀವ್ರ ಅಡ್ಡಿಯಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇಲ್ಲಿನ ಕಪ್ಪಗಲ್ ರಸ್ತೆಯಲ್ಲಿ ಹಸುಗಳ ತಲೆ ಪತ್ತೆಯಾದ ಪ್ರಕರಣಕ್ಕೆ ಸಂಬಂಧ ಅಪರಿಚಿತರ ವಿರುದ್ಧ ನಗರದ ನಿವಾಸಿ ಹರೀಶ ಕುಮಾರ ಎಂಬುವವರು ಗಾಂಧಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಯಾರೋ ದುಷ್ಕರ್ಮಿಗಲು ಎರಡು ಜಾನುವಾರುಗಳನ್ನು ಕೊಂದು, ಅವುಗಳ ತಲೆಗಳನ್ನು ಪ್ಲಾಸ್ಟಿಕ್ ಚೀಲದಲ್ಲಿ ಹಾಕಿ ಸಾರ್ವಜನಿಕ ಸ್ಥಳದಲ್ಲಿ ಎಸೆದು ಹೋಗಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!