ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಮುಕ್ತ ದೇವದಾಸಿಯರ ಗಣತಿ ಸಮರ್ಪಕ ನಡೆಸಿ : ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪದಾಧಿಕಾರಿಗಳ ಒತ್ತಾಯ

ಬಳ್ಳಾರಿ / ಕಂಪ್ಲಿ : ವಿಮುಕ್ತ ದೇವದಾಸಿಯರು ಮತ್ತು ಅವರ ಮೂರು ತಲೆಮಾರುಗಳ ಗಣತಿ ಸಮರ್ಪಕವಾಗಿ ನಡೆಸುವಂತೆ ಆಗ್ರಹಿಸಿ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಜೂಗಲ ಮಂಜುನಾಯಕಗೆ ಗುರುವಾರ ಮನವಿ ಸಲ್ಲಿಸಿದರು.

ತಾಲೂಕು ಅಧ್ಯಕ್ಷೆ ಪಾರ್ವತಿ, ಜಿಲ್ಲಾ ಕಾರ್ಯದರ್ಶಿ ಎ.ಸ್ವಾಮಿ ಮಾತನಾಡಿ, 2007-08ರ ಗಣತಿಯಲ್ಲಿ ರಾಜ್ಯದ 46,800 ವಿಮುಕ್ತ ದೇವದಾಸಿಯರನ್ನು ಗುರುತಿಸಿದ್ದು, 20 ಸಾವಿರಕ್ಕೂ ಅಧಿಕ ವಿಮುಕ್ತ ದೇವದಾಸಿಯರು ಆಗ ಹೊರಗುಳಿದಿದ್ದರು. ಸದ್ಯದ ಗಣತಿಯಲ್ಲಿ 23,385 ವಿಮುಕ್ತ ದೇವದಾಸಿಯರನ್ನು ಮಾತ್ರ ಗುರುತಿಸಲಾಗಿದೆ.

ಈ ಮುಂಚೆ ನಡೆಸಿದ ಗಣತಿ ದೋಷದಿಂದ ಕೂಡಿದೆ. ಪಟ್ಟಿಯಲ್ಲಿ ಇಲ್ಲದ ವಿಮುಕ್ತ ದೇವದಾಸಿಯರ ಗಣತಿ ಮಾಡಬೇಕು ಕೂಡಲೇ ಬಾಕಿ ಪಿಂಚಣಿ ಬಿಡುಗಡೆಗೊಳಿಸಿ ಹಾಗೂ ಮಕ್ಕಳ ಶಿಕ್ಷಣಕ್ಕೆ ತಾಯಿಯ ದೇವದಾಸಿ ದೃಢೀಕರಣ ಪತ್ರ ನೀಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ ತಾಯಮ್ಮ, ಲಕ್ಷ್ಮೀದೇವಿ, ಗಂಗಮ್ಮ, ಮರಿಯಮ್ಮ, ಹೊನ್ನೂರಮ್ಮ, ಹುಲಿಗೆಮ್ಮ, ಶಿವಮ್ಮ, ರಾಜ್ಯ ದೇವದಾಸಿ ಮಹಿಳೆಯರ-ಮಕ್ಕಳ ಹೋರಾಟ ಸಮಿತಿ ತಾಲೂಕು ಕಾರ್ಯದರ್ಶಿ ರಾಮ, ಓಬಳೇಶ ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!