ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ವತಿಯಿಂದ ಪರಿಸರ ದಿನಾಚರಣೆ

ಬಳ್ಳಾರಿ / ಕಂಪ್ಲಿ: ಮುಂದಿನ ಪೀಳಿಗೆಯ ನೆಮ್ಮದಿ, ಭವಿಷ್ಯಕ್ಕಾಗಿ ಪರಿಸರ ಉಳಿಸುವ ಅಗತ್ಯವಿದೆ ಎಂದು ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ರೋಹಿತಾಕ್ಷ ತಿಳಿಸಿದರು. ತಾಲ್ಲೂಕಿನ ಚಿಕ್ಕಜಾಯಿಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶನಿವಾರ ನಡೆದ ವಿಶ್ವ ಪರಿಸರ ದಿನಾಚರಣೆ ಜಾಗೃತಿ ಮತ್ತು ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಪ್ರಕೃತಿ ಸಮತೋಲನ ನಮ್ಮೆಲ್ಲರ ಹೊಣೆ ನಾವೆಲ್ಲರೂ ಪರಿಸರನ್ನ ಉಳಿಸಿ ಬೆಳೆಸಬೇಕು ಮುಂದಿನ ಜನಾಂಗಕ್ಕೆ ಪರಿಸರದಿಂದ ಉಜ್ವಲ ಭವಿಷ್ಯ ಸಿಗಬೇಕೆಂದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರಿಗೆ ವಿವಿಧ ತಳಿಯ ಸಸಿಗಳನ್ನು ಉಚಿತವಾಗಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಪ್ರಗತಿಪರ ರೈತ ಅಮರೇಗೌಡ, ಮುಖ್ಯಶಿಕ್ಷಕ ಮಲ್ಲಿಕಾರ್ಜುನ ಕಲ್ಲೂರ್, ಎಸ್.ಡಿ.ಎಂ.ಸಿ ಅಧ್ಯಕ್ಷ ವೀರೇಶ್‌ಗೌಡ, ಟ್ರಸ್ಟ್ ಯೋಜನಾಧಿಕಾರಿ ರಾಘವೇಂದ್ರ, ಕೃಷಿ ಅಧಿಕಾರಿ ಎಸ್.ಬಿ.ಸಂಜುಕುಮಾ‌ರ್, ಪ್ರಮುಖರಾದ ಪಾಂಡುರಂಗ, ಸುರೇಶ್, ಗಂಗಮ್ಮ, ಸಂಗೀತಾ, ಸಿರಿಷಾ ಸೇರಿದಂತೆ ಇತರರು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!