ವಿರಾಜಪೇಟೆ : ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಬಿ.ಕೆ. ಹರಿಪ್ರಸಾದ್ ಅವರನ್ನು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರು ಬೆಂಗಳೂರಿನ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.
ಕಾಂಗ್ರೆಸ್ ನ ಸೈದ್ಧಾಂತಿಕ ಹಾದಿಯ ಹೋರಾಟ ಮತ್ತು ಪಕ್ಷದ ಹಲವು ವಿಷಯಗಳಿಗೆ ಸಂಬಂಧಿಸಿದಂತೆ ಅವರೊಂದಿಗೆ ಚರ್ಚಿಸಿದರು.
ವರದಿ : ಪ್ರಿತುನ್ ಪೂವಣ್ಣ




















