ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ನೋಟ್ ಬುಕ್, ಶಾಲಾ ಬ್ಯಾಗ್ ವಿತರಣೆ

ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಪ್ರೌಢಶಾಲೆ ಹೆಬ್ಬಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಹಾಗೂ ಶಾಲಾ ಬ್ಯಾಗ್ ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು .
ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೆಂಬಲ ನೀಡುವ ಸಲುವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿಗಳನ್ನು ಒದಗಿಸುವ ಉದಾರ ಮನೋಭಾವನೆಯನ್ನುಳ್ಳ ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳಾದ ಶ್ರೀ ಹೆಚ್ ಎನ್ ಪುಟ್ಟೇಗೌಡ (ನಿವೃತ್ತ ಸೈನಿಕರು), ಕಡುವಿನ ಹೊಸಹಳ್ಳಿಯ ಶ್ರೀ ಕುಮಾರ್ (ಸಿಂಗಾಪುರ್), ಶ್ರೀ ದೀಪಕ್ ಕೆ (ಮುಖ್ಯ ಇಂಜಿನಿಯರ್ ರೈಲ್ವೆ ಇಲಾಖೆ) ಇವರ ಸಹೋದರ ಶ್ರೀ ಕೆ ಸೂರಜ್ ಹಾಗೂ ಸಮಾಜ ಸೇವಕಿ ಶ್ರೀಮತಿ ಮಂಗಳಾರವರ ಪತಿ ಶ್ರೀ ಸುಂದರ್ ರವರು ನೋಟ್ ಬುಕ್ ಗಳು ಹಾಗೂ ಶಾಲಾ ಬ್ಯಾಗ್ ಗಳ ದಾನಿಗಳಾಗಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳಿಗೆ ಈ ಶೈಕ್ಷಣಿಕ ಸಾಮಗ್ರಿಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಿವೃತ್ತ ಸೈನಿಕರಾದ ಶ್ರೀ ಪುಟ್ಟೇಗೌಡರು ವಿದ್ಯಾರ್ಥಿಗಳು ಶಿಸ್ತು ಹಾಗೂ ಪರಿಶ್ರಮದಿಂದ ಅಭ್ಯಾಸ ಮಾಡಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಹಾಗೂ ಶಾಲಾ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಉತ್ತೇಜನಕ್ಕೆ ತಾವು ಸದಾ ಬದ್ಧರಾಗಿರುತ್ತೇವೆ ಎಂದು ತಿಳಿಸಿದರು. ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ಶ್ರೀಮತಿ ಮಂಗಳಾರವರ ಪತಿ ಶ್ರೀಯುತ ಸುಂದರ್ ಮಾಜಿ ಸೈನಿಕರು ಇವರು ಮಾತನಾಡುತ್ತಾ ವಿದ್ಯಾರ್ಥಿಗಳ ಆಲೋಚನೆಗಳು ಮತ್ತು ಕನಸುಗಳು ದೊಡ್ಡದಾಗಿರಬೇಕು ಅವುಗಳನ್ನು ಸಾಕಾರಗೊಳಿಸಲು ನಿರಂತರ ಪರಿಶ್ರಮವನ್ನು ಪಡಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತನ್ನು ಹೇಳಿದರು.
ಸಂಸ್ಥೆಯ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ರಾಜಶೇಖರ್ ರವರು ಮಾತನಾಡುತ್ತಾ ಶಾಲಾ ಅಭಿವೃದ್ಧಿಗೆ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಬೇಕಾಗಿರುವ ಅವಶ್ಯಕತೆ ಶೈಕ್ಷಣಿಕ ಸಾಮಗ್ರಿಗಳನ್ನು ದಾನವಾಗಿ ನೀಡಿರುವ ದಾನಿಗಳಾದ ಶ್ರೀ ಕೆ ದೀಪಕ್, ಶ್ರೀ ಕುಮಾರ ಸಿಂಗಾಪುರ್, ಶ್ರೀಮತಿ ಮಂಗಳ ಸುಂದರ್ ಮತ್ತು ಸದಾ ಶಾಲಾಭಿಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಶ್ರೀ ಎಚ್ ಎನ್ ಪುಟ್ಟೇಗೌಡ ರವರಿಗೆ ಹಾಗೂ ದಾನಿಗಳ ಕುಟುಂಬ ವರ್ಗದವರಿಗೆ ಸಂಸ್ಥೆಯ ಪರವಾಗಿ,ಆಡಳಿತ ಮಂಡಳಿಯ ಪರವಾಗಿ, ಶಿಕ್ಷಕರ ಪರವಾಗಿ ಹಾಗೂ ವಿದ್ಯಾರ್ಥಿಗಳ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತಾ ನೀಡಿರುವ ಸಾಮಗ್ರಿಗಳನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು ಹಾಗೆಯೇ 10ನೇ ತರಗತಿಯಲ್ಲಿ ಶೇಕಡಾ ನೂರರಷ್ಟು ಫಲಿತಾಂಶ ನೀಡಿದ ಶಿಕ್ಷಕ ವೃಂದಕ್ಕೆ ಹಾಗೂ ವಿದ್ಯಾರ್ಥಿಗಳಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಈ ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರಾದ ಬಸವರಾಜ ಶೆಟ್ಟಿ, ಶಿಕ್ಷಕರಾದ ವೆಂಕಟ್ ನಾಯಕ್, ಕವಿತಾ ಡಿ, ಲೋಕೇಶ್ ಸಿ ಡಿ, ಬೋಜೇಗೌಡ ,ಮುತ್ತಣ್ಣವರ ಅನಂತ್, ಯೋಗೇಶ್, ರೇಣುಕಸ್ವಾಮಿ ಮತ್ತಿತರರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!