ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕರಾದ ಶಿವರಾಜ್ ತಂಗಡಗಿ, ಕಂಪ್ಲಿ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡುವಂತೆ ಭೂನ್ಯಾಯ ಮಂಡಳಿ ಸದಸ್ಯ ವಿ. ಮೌನೇಶ ಒತ್ತಾಯ

ಬಳ್ಳಾರಿ / ಕಂಪ್ಲಿ : ಸಾಮಾಜಿಕ ನ್ಯಾಯದ ತತ್ವದಡಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಚಿವ ಸಂಪುಟದಲ್ಲಿ ಭೋವಿ ಸಮುದಾಯಕ್ಕೆ ಸಚಿವ ಸ್ಥಾನ ಮತ್ತು ಕಂಪ್ಲಿ ಶಾಸಕ ಜೆ.ಎನ್.ಗಣೇಶಗೆ ಸಚಿವ ಸ್ಥಾನ ನೀಡಬೇಕು ಎಂದು ಕಂಪ್ಲಿ ತಾಲೂಕು ಭೂನ್ಯಾಯ ಮಂಡಳಿ ಸದಸ್ಯ ಮತ್ತು ಭೋವಿ ಸಮಾಜದ ಯುವ ನಾಯಕ ವಿ.ಮೌನೇಶ್ ಆಗ್ರಹಿಸಿದರು.
ಅವರು ಸೋಮವಾರ ಪಟ್ಟಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ‘ಶಾಸಕರಾದ ಶಿವರಾಜ್ ತಂಗಡಗಿ, ಮತ್ತು ಕಂಪ್ಲಿ ಜೆ.ಎನ್.ಗಣೇಶ ಅವರು ಪಕ್ಷದ ಸಂಘಟನೆ ಹಾಗೂ ಸಾರ್ವಜನಿಕ ಜೀವನದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದಾರೆ. ಇವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಾಮಾಜಿಕ ನ್ಯಾಯದ ಸಂದೇಶ ಸಾರಬೇಕು’. ‘ಭೋವಿ ಸಮುದಾಯವು ರಾಜ್ಯದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿದ್ದು, ವಿಧಾನಸೌಧ ನಿರ್ಮಾಣದಿಂದ ಹಿಡಿದು ವಿವಿಧ ನೀರಾವರಿ ಯೋಜನೆಗಳ ಅಭಿವೃದ್ಧಿಯವರೆಗೆ ಸಮುದಾಯದ ಪಾತ್ರ ಪ್ರಮುಖವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅವಧಿಯಲ್ಲೂ ಶಿವರಾಜ ತಂಗಡಗಿ ಅವರಿಗೆ ಸಚಿವ ಸ್ಥಾನ ನೀಡಿರುವುದು ಗಮನಾರ್ಹವಾಗಿದೆ. ಇದರಿಂದ ರಾಜ್ಯದ ಜನರ ಸೇವೆ ಮಾಡಲಾಗಿದೆ. ಇನ್ನೂ ಭೋವಿ ಸಮಾಜದ ಅಭಿವೃದ್ಧಿ ಜೊತೆಗೆ ರಾಜ್ಯದ ಜನರ ಸೇವೆಗಾಗಿ ತಂಡಗಿ ಅವರಿಗೆ ಮತ್ತೊಮ್ಮೆ ಸಚಿವ ಸ್ಥಾನ ಕಲ್ಪಿಸಬೇಕು. ಕಳೆದ ಎಂಟು ವರ್ಷದಲ್ಲಿ ಶಾಸಕ ಜೆ.ಎನ್.ಗಣೇಶ ಅವರು ಕ್ಷೇತ್ರದಲ್ಲಿ ಅನೇಕ ಜನಪರ ಕಾರ್ಯಗಳೊಂದಿಗೆ ಮಾದರಿಯಾಗಿದ್ದಾರೆ. ಕಾಂಗ್ರೆಸ್ ನ ಶಿಸ್ತಿನ ಸಿಪಾಯಿಯಾಗಿ ಸೇವೆ ಸಲ್ಲಿಸುತ್ತಿರುವ ಶಾಸಕ ಗಣೇಶ ಇವರಿಗೆ ಸ್ಥಾನ ನೀಡಬೇಕೆಂಬುದು ಬಹುದಿನದ ಹಕ್ಕೋತ್ತಾಯವಾಗಿದೆ. ಸಿಎಂ ಡಿ.ಕೆ.ಶಿವುಕುಮಾರ ಅವರ ಮೊದಲ ಹಂತದ ಸಂಪುಟ ರಚನೆಯಲ್ಲಿ ಶಾಸಕರಾದ ಶಿವರಾಜ ತಂಗಡಗಿ ಮತ್ತು ಜೆ.ಎನ್.ಗಣೇಶಗೆ ಅವಕಾಶ ದೊರಕದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ರಾಜ್ಯ ಮತ್ತು ಕ್ಷೇತ್ರದ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಎರಡನೇ ಸಂಪುಟ ವಿಸ್ತರಣೆ ವೇಳೆ ಕಡ್ಡಾಯವಾಗಿ ಇಬ್ಬರಿಗೂ ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!