ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಕ್ಕಳ ಹಕ್ಕುಗಳ ಜಾಗೃತಿಯಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದು- ಪ್ರೊ.ವಿಜಯಾ ಕೋರಿಶೆಟ್ಟಿ ಅಭಿಮತ

ವಿಜಯಪುರ: ಹದಿಹರೆಯದ ಮಕ್ಕಳ ಆರೋಗ್ಯ, ಮಕ್ಕಳ ಹಕ್ಕುಗಳು, ರಸ್ತೆ ಸುರಕ್ಷತೆ ಕುರಿತು ಸಮಾಜದಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳ ಜವಾಬ್ದಾರಿ ಮಹತ್ವದ್ದಾಗಿದೆ ಎಂದು ಮಹಿಳಾ ವಿವಿಯ ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಮಕ್ಕಳ ವಿಷಯಗಳ ಕುರಿತು ಕರ್ನಾಟಕ ರಾಜ್ಯದ ಪತ್ರಕರ್ತರಿಗೆ ಪರಿಚಯ” ವಿಷಯದಡಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಹಕ್ಕುಗಳು, ಆರೋಗ್ಯ ಸಮಸ್ಯೆಗಳು, ಹೆಚ್ಚುತ್ತಿರುವ ನಾನ್-ಕಮ್ಯುನಿಕೇಬಲ್ ರೋಗಗಳು, ಪೌಷ್ಟಿಕ ಆಹಾರ ಹಾಗೂ ರಸ್ತೆ ಸುರಕ್ಷತೆ ಕುರಿತಂತೆ ಈ ಕಾರ್ಯಾಗಾರದಲ್ಲಿ ಚರ್ಚೆ ನಡೆಯುತ್ತಿರುವುದು ಅತ್ಯಂತ ಮಹತ್ವದ್ದಾಗಿದೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್ ಮತ್ತು ಸಾಮಾಜಿಕ ಮಾಧ್ಯಮಗಳು ಮಕ್ಕಳ ಜೀವನದ ಮೇಲೆ ಹೆಚ್ಚು ಪ್ರಭಾವ ಬೀರುತ್ತಿದ್ದು, ಪತ್ರಕರ್ತರು ಹಾಗೂ ಮಾಧ್ಯಮಗಳು ಸುದ್ದಿಗಳನ್ನು ಅತ್ಯಂತ ಸಂವೇದನಾಶೀಲವಾಗಿ ಜನರಿಗೆ ತಲುಪಿಸಬೇಕು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದ, ಯುನಿಸೆಫ್, ಹೈದರಾಬಾದ್‌ನ ಪ್ರೊಸೂನ್ ಸೇನ್ ಮಾತನಾಡಿ, ಕಿಶೋರ ವಯಸ್ಸಿನ ಮಕ್ಕಳಲ್ಲಿ ಅಸಂಕ್ರಾಮಿಕ ರೋಗಗಳ ಪ್ರಮಾಣ ಹೆಚ್ಚುತ್ತಿವೆ. ೧೧ ರಿಂದ ೧೯ ವರ್ಷದ ವಯಸ್ಸಿನಲ್ಲಿಯೇ ಮಾನಸಿಕ ಆರೋಗ್ಯ ಸಮಸ್ಯೆ, ಮಧುಮೇಹ, ಕ್ಯಾನ್ಸರ್ ಹಾಗೂ ಹೃದಯ ಸಂಬAಧಿತ ಕಾಯಿಲೆಗಳು ಹೆಚ್ಚಾಗುತ್ತಿವೆ. ಜಂಕ್ ಫುಡ್ ಸೇವನೆ ಹಾಗೂ ದೈಹಿಕ ಚಟುವಟಿಕೆಗಳ ಕೊರತೆ ಪ್ರಮುಖ ಕಾರಣಗಳಾಗಿವೆ ಎಂದರು.
ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರೊ.ಓಂಕಾರ ಕಾಕಡೆ ಮಾತನಾಡಿ, ಮಕ್ಕಳ ಸಮಸ್ಯೆಗಳು, ಗ್ರಾಮೀಣ ಅಭಿವೃದ್ಧಿ ಹಾಗೂ ಸಾಮಾಜಿಕ ವಿಷಯಗಳಿಗೆ ಪತ್ರಕರ್ತರು ಹೆಚ್ಚಿನ ಆದ್ಯತೆ ನೀಡಬೇಕು. ಪರಿಣಾಮಕಾರಿ ಮತ್ತು ತುರ್ತುಭಾವ ಮೂಡಿಸುವ ಬರವಣಿಗೆಯಿಂದ ಸಮಾಜದ ಸಮಸ್ಯೆಗಳನ್ನು ಜನರ ಗಮನಕ್ಕೆ ತರಬೇಕು. ಅಷ್ಟೇ ಅಲ್ಲದೇ ಈ ಕಾರ್ಯಾಗಾರ ಪತ್ರಕರ್ತರ ನಡುವೆ ಅನುಭವ ವಿನಿಮಯ ಹಾಗೂ ಹೊಸ ಚಿಂತನೆಗಳಿಗೆ ಉತ್ತಮ ವೇದಿಕೆಯಾಯಿತು ಎಂದರು.
ಕಾರ್ಯಕ್ರಮದಲ್ಲಿ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ ಸಪ್ನಾ ಎಮ್ ಎಸ್, ಪ್ರ‍್ರಾಸ್ತಾವಿಕವಾಗಿ ಮಾತನಾಡಿ ರಾಜ್ಯದ ಹಲವು ಕಡೆಗಳಲ್ಲಿ ಇಂಥ ಕಾರ್ಯಾಗಾರಗಳನ್ನು ಸಂಘಟಿಸುವ ಮೂಲಕ ಪತ್ರಕರ್ತರಲ್ಲಿ ಕಿಶೋರರ ಆರೋಗ್ಯ ಮತ್ತು ಪೌಷ್ಟಿಕತೆ, ಸಾಂಕ್ರಾಮಿಕವಲ್ಲದ ರೋಗಗಳು, ಆರೋಗ್ಯಕರ ಆಹಾರ ಪದ್ಧತಿ ಹಾಗೂ ರಸ್ತೆ ಸುರಕ್ಷತೆ ಕುರಿತ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಡಾ.ರಾಕೇಶ್ ಮತ್ತು ರಾಜ್ಯದ ವಿವಿಧ ಜಿಲ್ಲೆಗಳ ಪತ್ರಕರ್ತರು, ಮತ್ತಿತರಿದ್ದರು. ಮಂಜುನಾಥ್ ನಿರೂಪಿಸಿದರು, ಕಾರ್ಯಕ್ರಮ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರೊ. ಸಪ್ನಾ ಎಮ್ ಎಸ್ ಸ್ವಾಗತಿಸಿದರು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!