ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದಲಿಯ ಸಂಘರ್ಷ ಸಮಿತಿಗೆ ನೂತನ ತಾಲೂಕು ಯುವ ಘಟಕ ಅಧ್ಯಕ್ಷರಾಗಿ ಕೆ. ಜಾಫರ್ ಆಯ್ಕೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಅತಿಥಿ ಗೃಹದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಬುದ್ಧ, ಬಸವ, ಅಂಬೇಡ್ಕರ್ ವಾದ)ಯ ತಾಲೂಕು ಮತ್ತು ಯುವ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಶುಕ್ರವಾರ ಆಯ್ಕೆ ಮಾಡಲಾಯಿತು. ಇಲ್ಲಿನ ಸಂಘಟನಾ ಸಭೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಮಾರ್ಗದರ್ಶನದಲ್ಲಿ ತಾಲೂಕು ಅಧ್ಯಕ್ಷ ಸಿ.ಬಸವರಾಜ ನೇತೃತ್ವದಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಿದರು. ತಾಲೂಕು ಉಪಾಧ್ಯಕ್ಷರಾಗಿ ಮೆಟ್ರಿ ಸೋಮಪ್ಪ ಮತ್ತು ತಾಲೂಕು ಯುವ ಘಟಕ ಅಧ್ಯಕ್ಷರಾಗಿ ಕೆ.ಜಾಫರ್ ಇವರನ್ನು ಆಯ್ಕೆ ಮಾಡಿ, ಆದೇಶ ಪ್ರತಿ ನೀಡಿ, ಸನ್ಮಾನಿಸಿ ಅಭಿನಂದಿಸಿದರು. ನಂತರ ಜಿಲ್ಲಾ ಉಪಾಧ್ಯಕ್ಷ ಕರಡಿ ವಲಿಸಾಬ್ ಮಾತನಾಡಿ, ತಾಲೂಕು ಸೇರಿದಂತೆ ಬಳ್ಳಾರಿ ಜಿಲ್ಲೆಯಲ್ಲಿ ಸಂಘಟನೆಯನ್ನು ಬಲ ಪಡಿಸುವ ಸಲುವಾಗಿ ರಾಜ್ಯಾದ್ಯಂತ ಘಟಕಗಳನ್ನು ತೆರೆದಿದ್ದು, ಜನ ಪರ ಚಳುವಳಿಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಂಡು ಬರುತ್ತಿರುವ ತಮ್ಮ ಸೇವೆಯನ್ನು ಗುರುತಿಸಿ ಆಯ್ಕೆ ಮಾಡಲಾಯಿತು. ತಾಲೂಕು ಮಟ್ಟದಲ್ಲಿ ಬಲಿಷ್ಠಗೊಳಿಸಲು ಜಿಲ್ಲಾ ಸಮಿತಿಯೊಂದಿಗೆ ಸಹಕರಿಸಬೇಕೆಂದು, ತಮ್ಮ ಹೋರಾಟ ಮುಂಚೂಣಿಯಲ್ಲಿ ಮಾಡಲು ಜಿಲ್ಲಾ ಸಮಿತಿಯೊಂದಿಗೆ ಸಹಕರಿಸುತ್ತಾ ಅಖಿಲ ಕರ್ನಾಟಕ ದಲಿತ ಸಂಘರ್ಷ ಸಮಿತಿ, ಸಂಘಟನೆಗೆ ಯಾವುದೇ ರೀತಿಯಲ್ಲಿ ಧಕ್ಕೆ ಬಾರದಂತೆ ಜನಪರ ಚಳುವಳಿಗಳನ್ನು ರೂಪಿಸಿಕೊಂಡು ಹೋಗಬೇಕು ಎಂದು ಕಿವಿ ಮಾತು ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಗೌರವಾಧ್ಯಕ್ಷ ಚಂದ್ರಶೇಖರ, ಖಜಾಂಚಿ ಗಂಗಾಧರ, ಮುಖಂಡರಾದ ಸಣ್ಣ ಹುಲುಗಪ್ಪ, ಅಂಜಿನಪ್ಪ, ರುದ್ರಪ್ಪ, ರಫೀಕ್, ಪಕ್ಕೀರಪ್ಪ, ಮಾರೆಪ್ಪ, ಅನ್ವರ್‌ಸಾಬ್, ಕೆ.ಲಕ್ಷ್ಮಣ ಬಾಲಪ್ಪ, ಯಲ್ಲಪ್ಪ ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!