ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಿದ್ದರಬೆಟ್ಟದಲ್ಲಿ 20ನೇ ವರ್ಷದ ಮಹೋತ್ಸವಕ್ಕೆ ಭರ್ಜರಿ ಸಿದ್ಧತೆ.

ಜೂನ್ 21ರಂದು ಶ್ರೀ ಜಗಜ್ಯೋತಿ ಬಸವೇಶ್ವರರ ಜಯಂತೋತ್ಸವ ಹಾಗೂ ಜನಜಾಗೃತಿ ಧರ್ಮ ಸಮಾವೇಶ, ಸಾಮೂಹಿಕ ವಿವಾಹ ಕಾರ್ಯಕ್ರಮ.

ಸಿದ್ದರ ತಪೋಭೂಮಿಗೆ ಬರಲಿರುವ ಧರ್ಮಸ್ಥಳದ ಪರಮಪೂಜ್ಯ ಶ್ರೀ ಡಾ. ವೀರೇಂದ್ರ ಹೆಗ್ಗಡೆ
ಶ್ರೀಮಠದಿಂದ ಡಾ. ವೀರೇಂದ್ರ ಹೆಗ್ಗಡೆಗೆ “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ.

ಕೊರಟಗೆರೆ: ಸಿದ್ದರಬೆಟ್ಟದ ಬಾಳೆ ಹೊನ್ನೂರು ಖಾಸಾ ಶಾಖಾ ಮಠದಲ್ಲಿ ನಡೆಯುವ ಉಚಿತ ಸಾಮೂಹಿಕ ವಿವಾಹವಾಗಲು ಬಯಸುವ ನೂತನ ವಧುವರರು ಮಠದಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಪೀಠಾಧ್ಯಕ್ಷ ಶ್ರೀ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಯವರು ತಿಳಿಸಿದರು.
ವಾರ್ಷಿಕೋತ್ಸವ ಸಮಾರಂಭದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜೂನ್ 21ರ ಭಾನುವಾರ ಮಠದಲ್ಲಿ 20ನೇ ವಾರ್ಷಿಕೋತ್ಸವ, ಜಗದ್ಗುರು ರೇಣುಕಾಚಾರ್ಯ ಮತ್ತು ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಿಸಲಾಗುವುದು. ವೀರಶೈವ ವಟುಗಳಿಗೆ ಉಚಿತ ದೀಕ್ಷಾ ಸಂಸ್ಕಾರ ನೀಡುವುದರೊಂದಿಗೆ ಉಚಿತ ಸಾಮೂಹಿಕ ವಿವಾಹ ನಡೆಸಲಾಗುವುದು. ಸಾಮೂಹಿಕ ವಿವಾಹ ಜೂನ್ 21ರ ಮಧ್ಯಾಹ್ನ 12.20 ನಡೆಯಲಿದೆ ಎಂದರು.
ಕ್ಷೇತ್ರದ ಶಾಸಕ ಹಾಗೂ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರವರು ಉದ್ಘಾಟನೆಯನ್ನು ಮಾಡಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿ
ಸಾವಿರಾರು ಭಕ್ತರ ಸಮ್ಮುಖದಲ್ಲಿ ನಡೆಯಲಿರುವ ಐತಿಹಾಸಿಕ ಸಮಾರಂಭ ಮಹೋತ್ಸವ ಎಂದರು.
ಸಂಜೀವಿನಿ ಪರ್ವತದ ತಪ್ಪಲಿನ ಪುಣ್ಯಕ್ಷೇತ್ರವಾದ ಸಿದ್ದರಬೆಟ್ಟದಲ್ಲಿ ಕಾರ್ಯಕ್ರಮಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಜೂನ್ 21ರಂದು ನಡೆಯಲಿರುವ ಈ ಧಾರ್ಮಿಕ ಮಹೋತ್ಸವದಲ್ಲಿ ಧರ್ಮಸ್ಥಳದ ಪರಮ ಪೂಜ್ಯರಾದ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಅವರಿಗೆ 20ನೇ ವರ್ಷದ ಪ್ರತಿಷ್ಠಿತ “ಸಿದ್ಧಶ್ರೀ ಪ್ರಶಸ್ತಿ” ಪ್ರದಾನ ಮಾಡಲಾಗುತ್ತದೆ.
ಶ್ರೀಮಠದ ಪೀಠಾಧ್ಯಕ್ಷರಾದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಾಮೂಹಿಕ ವಿವಾಹ, ಜನಜಾಗೃತಿ ಧರ್ಮ ಸಮಾವೇಶ ಹಾಗೂ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ.
ಕಾರ್ಯಕ್ರಮದಲ್ಲಿ ರಾಜ್ಯದ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ, ಮಧುಗಿರಿ ಶಾಸಕ ಕೆ. ಎನ್. ರಾಜಣ್ಣ, ರಘುವೀರ ರೆಡ್ಡಿ ಮಾಜಿ ಮಂತ್ರಿ ಸೇರಿದಂತೆ ಹಲವು ಗಣ್ಯರು, ರಾಜಕೀಯ ಮುಖಂಡರು ಹಾಗೂ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.
ಈ ಕುರಿತು ಮಾತನಾಡಿದ ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮೀಜಿಗಳು, “ಕಳೆದ 20 ವರ್ಷಗಳಿಂದ ಶ್ರೀಮಠದಲ್ಲಿ ಭಕ್ತರಿಗೆ ಅನ್ನಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ಇನ್ನು ಮುಂದೆ ಸಿದ್ದರಬೆಟ್ಟದ ಅಧಿದೇವತೆ ಸಿದ್ದಪ್ಪನಿಗೆ ಪ್ರಿಯವಾದ ಹೋಳಿಗೆ-ತುಪ್ಪ ಪ್ರಸಾದವನ್ನು ವರ್ಷಪೂರ್ತಿ, ಪ್ರತಿದಿನ ಆಗಮಿಸುವ ಭಕ್ತರಿಗೆ ವಿತರಿಸುವ ಕಾರ್ಯ ಪ್ರಾರಂಭಿಸುವುದಾಗಿ ತಿಳಿಸಿದರು.
ಈ ಮಹತ್ವಾಕಾಂಕ್ಷಿ ಯೋಜನೆಗೆ ಭಕ್ತರು ಸಂಪೂರ್ಣ ಸಹಕಾರ ನೀಡುವ ವಿಶ್ವಾಸ ವ್ಯಕ್ತಪಡಿಸಿದ ಶ್ರೀಗಳು, ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಸದ್ಭಕ್ತರನ್ನು ಆಹ್ವಾನಿಸಿದರು. ಕೊರಟಗೆರೆಯ ಬಸವೇಶ್ವರ ದೇವಾಲಯದಲ್ಲಿ ಪೂರ್ವಭಾವಿ ಸಭೆಯಲ್ಲಿ
ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಕಾಮರಾಜು, ಬಿಜೆಪಿ ತಾಲ್ಲೂಕು ಅಧ್ಯಕ್ಷ ರುದ್ರೇಶ್, , ಎ ಡಿ ಬಲರಾಮಯ್ಯ, ಪವನ್ ಕುಮಾರ್, ಮಹಾಲಿಂಗಪ್ಪ, ದರ್ಶನ್, ಮಂಜುಳಾರಾಧ್ಯ, ರಾಜಣ್ಣ, ಸೋಮಣ್ಣ, ಆರ್.ಎಸ್.ರಾಜಣ್ಣ, , ಶಿವಕುಮಾರ್, ಪಂಚಾ ಕ್ಷರಯ್ಯ, ವೀರಭದ್ರಯ್ಯ(ಭದ್ರಣ್ಣ),ರವಿಕುಮಾರ್, ಮಹೇಶ್, ಇನ್ನೂ ಅನೇಕ ಮುಖಂಡರು ಸದ್ಭಕ್ತರು ಭಾಗಿಯಾಗಿದ್ದರು.

ವರದಿ.ಪ್ರಸನ್ನ ಕುಮಾರ್. ಎಸ್.ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!