ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಎಸ್ಐಆರ್ ವಿರೋಧಿ ಜಾಗೃತಿ ಜಾಥಾ

ಬಳ್ಳಾರಿ / ಕಂಪ್ಲಿ: ಕೇಂದ್ರ ಸರ್ಕಾರದ ಕೈಗೊಂಬೆಯಾಗಿರುವ ಚುನಾವಣಾ ಆಯೋಗವು ಎಸ್ಐಆರ್ ಪರಿಷ್ಕರಣೆ ಮೂಲಕ ದೇಶದಲ್ಲಿ ಮತದಾರರ ಹಕ್ಕನ್ನು ಕಿತ್ತಿಕೊಳ್ಳಲು ಮುಂದಾಗಿದೆ ಎಂದು ಗ್ಯಾರಂಟಿ ಯೋಜನೆಗಳ ತಾಲೂಕು ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್ ಗುಡುಗಿದರು.
ಪಟ್ಟಣಕ್ಕೆ ಆಗಮಿಸಿದ ಎಸ್ಐಆರ್ ವಿರೋಧಿ ಜಾಗೃತಿ ಜಾಥಾವನ್ನು ಇಲ್ಲಿನ ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಗುರುವಾರ ಸ್ವಾಗತಿಸಿ, ನಂತರ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಪುರಸಭೆ ಮುಂಭಾಗದ ವೇದಿಕೆಯಲ್ಲಿ ಮಾತನಾಡಿ, ಮತದಾರರ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಕೋಟ್ಯಂತರ ಜನರ ಮತದಾನದ ಹಕ್ಕನ್ನು ಕಸಿಯಲು ಕೇಂದ್ರ ಚುನಾವಣಾ ಆಯೋಗ ಹೊರಟಿದೆ. ರಾಷ್ಟ್ರದಲ್ಲಿ ಎಸ್‌ಐಆರ್‌ ಹೆಸರಿನಲ್ಲಿ ಸಂವಿಧಾನಾತ್ಮಕ ಮತದಾನದ ಹಕ್ಕು ಕಿತ್ತುಕೊಳ್ಳುವ ಹುನ್ನಾರ ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸಿರುವುದನ್ನು ದೇಶದ ನಾಗರಿಕರು ವಿರೋಧಿಸಬೇಕು. ಚುನಾವಣಾ ಆಯೋಗ ಸಂವಿಧಾನದ ತಳಹದಿಯಲ್ಲಿ ನೀಡಿರುವ ಹಕ್ಕನ್ನು ಕಿತ್ತುಕೊಳ್ಳುವ ಕೆಲಸವನ್ನು ಎಸ್.ಐಆರ್‌ ಹೆಸರಿನಲ್ಲಿ ಸರ್ಕಾರ ನಡೆಸಿದೆ, ಇದಲ್ಲದೆ ಕೋರ್ಟ್‌ ಚುನಾವಣಾ ಆಯೋಗಕ್ಕೆ ಹೆಚ್ಚಿನ ಅಧಿಕಾರ ನೀಡಿ ಜನರ ಸ್ವಾತಂತ್ರ್ಯ ಮೊಟಕುಗೊಳಿಸು ಪ್ರಯತ್ನ ಇದಾಗಿದೆ ಎಂದರು.
ಮುಖಂಡ ಎನ್.ಹಬೀಬ್ ರೆಹಮಾನ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ಈ ಕ್ರಮವನ್ನು ಮತದಾರರು ಒಗ್ಗಟ್ಟಿನಿಂದ ವಿರೋಧಿಸಿ ಜನರ ಹಕ್ಕು ರಕ್ಷಣೆಗೆ ಮುಂದಾಗಬೇಕಾಗಿದೆ. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ದೇಶವ್ಯಾಪಿ ಕೋಟ್ಯಂತರ ಜನರ ಮತದಾನ ಹಕ್ಕನ್ನು ಕಸಿಯಲು ಕೇಂದ್ರ ಸರ್ಕಾರ ಹೊರಟಿದ್ದು, ಇದರ ವಿರುದ್ಧ ದೊಡ್ಡ ಅಭಿಯಾನ ನಡೆಸಬೇಕಿದೆ.
ಕೆಲ ರಾಜ್ಯಗಳಲ್ಲಿ ಎಸ್‌ಐಆರ್ ನಡೆಸಿ, ಕೋಟಿ ಜನರನ್ನು ಮತದಾರರ ಪಟ್ಟಿಯಿಂದ ಹೊರ ಹಾಕಲಾಗಿದ್ದು, ಇದರಲ್ಲಿ ಕೋಟಾಂತರ ಅರ್ಹ ಮತದಾರರಿದ್ದಾರೆ. ಇದೇ ಸಂಚಿನಿಂದಲೇ ಅನೇಕ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರ ಹಿಡಿದಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಿಶೇಷ ಜಾಗೃತಿ ಮೂಡಿಸಲು ಮುಂದಾಗಿದೆ. ಮತದಾರರ ಪಟ್ಟಿಯಿಂದ ಅರ್ಹರ ಹೆಸರುಗಳನ್ನು ಡಿಲಿಟ್ ಆಗದಂತೆ ತಡೆಯುವ ಬಗ್ಗೆ ಎಚ್ಚರವಹಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಸಿ.ಆರ್.ಹನುಮಂತ, ಕರಿಯಪ್ಪ ಗುಡಿಮನಿ, ವಸಂತರಾಜ ಕಹಳೆ, ಜಿ.ರಾಮಣ್ಣ, ಸಣಾಪುರ ಮರಿಸ್ವಾಮಿ, ಬಿ.ಸಿದ್ದಪ್ಪ, ಕುರುಗೋಡು ಚನ್ನಬಸುವರಾಜ, ಕೆ.ಷಣ್ಮುಕಪ್ಪ, ವಾಲ್ಮೀಕಿ ರಘು, ಹನುಮಂತಪ್ಪ, ಎನ್.ಗಂಗಣ್ಣ ಸೇರಿದಂತೆ ಕಾಂಗ್ರೆಸ್ ಮುಖಂಡರು,‌ ಕಾರ್ಯಕರ್ತರು, ಪ್ರಗತಿಪರ ಸಂಘಟನೆಗಳು, ಸಂಘ-ಸಂಸ್ಥೆಯವರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!