ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೆಡಿಪಿ ಸಭೆಯಲ್ಲಿ ಅಭಿವೃದ್ಧಿಗೆ ಒತ್ತು: ಅಧಿಕಾರಿಗಳಿಗೆ ಶಾಸಕ ಕೆ.ಎನ್. ರಾಜಣ್ಣ ಖಡಕ್ ಸೂಚನೆ

ಮಧುಗಿರಿ, ಜೂನ್ 17: ಮಧುಗಿರಿ ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ 2025–26ನೇ ಸಾಲಿನ ಮಾರ್ಚ್-2026 ಮಾಹೆಯ ಅಂತ್ಯದವರೆಗಿನ ನಾಲ್ಕನೇ ತ್ರೈಮಾಸಿಕ ಕೆ.ಡಿ.ಪಿ. (20 ಅಂಶಗಳ ಕಾರ್ಯಕ್ರಮ) ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಭಾಗವಹಿಸಿದ ಶಾಸಕ ಕೆ.ಎನ್. ರಾಜಣ್ಣ ಅವರು ವಿವಿಧ ಇಲಾಖೆಗಳ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದು ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಸಭೆಯಲ್ಲಿ ವಿದ್ಯಾರ್ಥಿಗಳ ಕಲ್ಯಾಣಕ್ಕೆ ಮೊದಲ ಆದ್ಯತೆ ನೀಡಿದ ಶಾಸಕ ರಾಜಣ್ಣ ಅವರು, ವಿಧಾನಸಭಾ ಕ್ಷೇತ್ರದ ಎಲ್ಲ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಸೌಲಭ್ಯ ತಲುಪುವಂತೆ ಶೇ.100ರಷ್ಟು ಗುರಿ ಸಾಧಿಸಲು ಉಚಿತ ಬ್ಯಾಂಕ್ ಖಾತೆ ತೆರೆಯುವ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ತಾಲ್ಲೂಕಿನಾದ್ಯಂತ ಪ್ರಗತಿಯಲ್ಲಿರುವ ಜಲ ಜೀವನ್ ಮಿಷನ್ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದೊಂದಿಗೆ ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಸೌಲಭ್ಯವನ್ನು ವಿಳಂಬವಿಲ್ಲದೆ ಒದಗಿಸುವಂತೆ ಆದೇಶಿಸಿದರು.
ಮಳೆಗಾಲದಲ್ಲಿ ಹರಿದು ಹೋಗುವ ನೀರನ್ನು ಸಂಗ್ರಹಿಸಿ ಅಂತರ್ಜಲ ಮಟ್ಟ ಹೆಚ್ಚಿಸುವ ಉದ್ದೇಶದಿಂದ ಅಗತ್ಯವಿರುವ ಕಡೆಗಳಲ್ಲಿ ಚೆಕ್ ಡ್ಯಾಂಗಳನ್ನು ನಿರ್ಮಿಸಲು ಹೆಚ್ಚಿನ ಒತ್ತು ನೀಡುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಪರಿಸರ ಸಂರಕ್ಷಣೆಗಾಗಿ ಸರ್ಕಾರಿ ಕಚೇರಿ ಆವರಣಗಳು ಹಾಗೂ ಶಾಲಾ ಆವರಣಗಳಲ್ಲಿ ವ್ಯಾಪಕವಾಗಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳುವಂತೆ ಸೂಚಿಸಿ, ಪ್ರತಿಯೊಬ್ಬ ಅಧಿಕಾರಿಯೂ ಪರಿಸರ ಕಾಳಜಿ ವಹಿಸುವಂತೆ ಕರೆ ನೀಡಿದರು.
ಸಭೆಯ ನಂತರ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲುಗಳನ್ನು ಸ್ವೀಕರಿಸಿದ ಶಾಸಕ ರಾಜಣ್ಣ ಅವರು, ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ ಅಧಿಕಾರಿಗಳಿಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಸಿಇಒ ಅಶ್ವಿಜಾ, ಉಪವಿಭಾಗಾಧಿಕಾರಿ ಗೊಟೂರು ಶಿವಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ, ತಾಲ್ಲೂಕು ಪಂಚಾಯಿತಿ ಆಡಳಿತಾಧಿಕಾರಿ ಸೋನಿಯಾ ವಾರ್ಣೇಕರ್, ಇಒ ಉತ್ತಮ್, ಪ್ರಭಾರ ತಹಶೀಲ್ದಾರ್ ಮಂಜುನಾಥ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗೇಂದ್ರ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ಚೌಡಪ್ಪ, ಟಿಎಪಿಸಿಎಂಎಸ್‌ನ ಮಲ್ಲಿಕಾರ್ಜುನಯ್ಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ನಾಗೇಶ್ ಬಾಬು, ಕೆಡಿಪಿ ಸದಸ್ಯರು ಹಾಗೂ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ರಂಗರಾಜು ಎಂ ಗರಣಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!