ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬೀದರ್‌ : ಜು.11 ರಂದು ಬೃಹತ್ ರಾಷ್ಟ್ರೀಯ ಲೋಕ ಅದಾಲತ್

ಬೀದರ್‌ : ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜು.11 ರಂದು ಜಿಲ್ಲಾದ್ಯಂತ ಬೃಹತ್ ರಾಷ್ಟ್ರೀಯ ಲೋಕ ಅದಾಲತ ಆಯೋಜಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಬಿ ರೆಹಮಾನ್ ಅವರು ಹೇಳಿದರು.
ನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕಚೇರಿ ಸಭಾಂಗಣ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬೃಹತ್ ಲೋಕ ಅದಾಲತ್‌ನಲ್ಲಿ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ, ವಿದ್ಯುತ್ ಪ್ರಕರಣಗಳು, ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು, ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು, ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆ ಎಂದರು.
ಈ ಹಿಂದೆ ಮಾ.14 ರಂದು ಹಮ್ಮಿಕೊಂಡಿದ್ದ ರಾಷ್ಟ್ರೀಯ ಲೋಕ ಅದಾಲತನಲ್ಲಿ ಜಿಲ್ಲಾದ್ಯಾಂತ ಒಟ್ಟು 66,440 ಪ್ರಕರಣಗಳು ಇತ್ಯರ್ಥಗೊಳಿಸಲಾಗಿದೆ.
ಇದರಲ್ಲಿ 11,869 ನ್ಯಾಯಾಲಯದಲ್ಲಿನ ಪೆಂಡಿಂಗ್ ಪ್ರಕರಣಗಳು, 54,571 ವ್ಯಾಜ್ಯಪೂರ್ವ ಪ್ರಕರಣಗಳು ಸೇರಿವೆ. ಈ ಬಾರಿ ಲೋಕ ಅದಾಲತನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇರುವ ಅತೀ ಹೆಚ್ಚು ಪ್ರಕರಣಗಳನ್ನು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 30,499 ಪ್ರಕರಣಗಳು ಪೆಂಡಿಂಗ್ ಇವೆ. ಅದರಲ್ಲಿ ಸಂಧಾನಕ್ಕಾಗಿ 1,780 ಪ್ರಕರಣಗಳನ್ನು ಗುರುತಿಸಲಾಗಿದ್ದು, ಇನ್ನು ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ ಹಾಗೂ ಎಲ್ಲಾ ಪೂರ್ವತಯಾರಿ ಮಾಡಿಕೊಂಡಿದ್ದೇವೆ ಎಂದು ಅವರು ಮಾಹಿತಿ ನೀಡಿದರು.
ಲೋಕ ಅದಾಲತ್ ನಲ್ಲಿ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಲಯದ ಶುಲ್ಕ ವಾಪಸ್ ಸಿಗಲಿದೆ. ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಹಾಗೆಯೇ ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆ.
ಸಾರಿಗೆ ಇಲಾಖೆಯಲ್ಲಿ 1991 ರಿಂದ 2022 ರ ಅವಧಿಯಲ್ಲಿ ದಾಖಲಾದ ಪ್ರಕರಣಗಳಿಗೆ ದಂಡದ ಮೊತ್ತದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಲಾಗಿದೆ. ಸಾರ್ವಜನಿಕರು ಜೂ. ರಿಂದ ಜು.10ರ ಒಳಗಡೆ ಈ ಸೌಲಭ್ಯವನ್ನು ಪಡೆಯಲು ಕಾಲಾವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಘವೇಂದ್ರ ಉಪಾಧ್ಯಾಯ ಅವರು ಮಾತನಾಡಿ, ನ್ಯಾಯಾಲಯಗಳಲ್ಲಿ ಸುದೀರ್ಘ ಕಾಲದಿಂದ ಬಾಕಿ ಉಳಿದಿರುವ ಮತ್ತು ರಾಜೀ ಮಾಡಿಕೊಳ್ಳಬಹುದಾದ ಪ್ರಕರಣಗಳನ್ನು ಸೌಹಾರ್ದಯುತವಾಗಿ ಇತ್ಯರ್ಥಪಡಿಸಿಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಒಂದು ಅತ್ಯುತ್ತಮ ಅವಕಾಶವಾಗಿದೆ. ಇಲ್ಲಿ ಕೇವಲ ಪ್ರಕರಣಗಳು ಇತ್ಯರ್ಥವಾಗುವುದಿಲ್ಲ, ಬದಲಿಗೆ ಉಭಯ ಪಕ್ಷಗಾರರ ನಡುವಿನ ಬಾಂಧವ್ಯವೂ ಗಟ್ಟಿಯಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಸಮಯ ಮತ್ತು ಹಣದ ಉಳಿತಾಯವಾಗುವುದಲ್ಲದೆ, ಇಲ್ಲಿ ನೀಡಲಾಗುವ ತೀರ್ಪಿಗೆ ಸಿವಿಲ್ ನ್ಯಾಯಾಲಯದ ತೀರ್ಪಿಗೆ ಇರುವಷ್ಟೇ ಕಾನೂನು ಮಾನ್ಯತೆ ಇರುತ್ತದೆ. ಇದರ ವಿರುದ್ಧ ಮೇಲ್ಮನವಿಗೆ ಅವಕಾಶವಿರುವುದಿಲ್ಲ. ಸಾರ್ವಜನಿಕರು ಮತ್ತು ವ್ಯಾಜ್ಯನಿರತರು ಯಾವುದೇ ಭಯ ಅಥವಾ ಹಿಂಜರಿಕೆಯಿಲ್ಲದೆ ಈ ಅದಾಲತ್‌ನಲ್ಲಿ ಭಾಗವಹಿಸಿ, ಪರಸ್ಪರ ಒಪ್ಪಿಗೆಯ ಮೂಲಕ ತಮ್ಮ ದಾವೆಗಳನ್ನು ಇತ್ಯರ್ಥಪಡಿಸಿಕೊಂಡು ನೆಮ್ಮದಿಯ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.

ವರದಿ: ರೋಹನ್ ವಾಘಮಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!