ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ರಾಹುಲ್ ಗಾಂಧಿ ಜನ್ಮದಿನಾಚರಣೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಚಂದ್ರಕಲಾ ಚಿತ್ರಮಂದಿರ ಎದುರುಗಡೆಯ ಮಾರೆಣ್ಣ ಹೋಟಲ್ ಬಳಿಯಲ್ಲಿ ರಾಜ್ಯ ಯುವ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಯೋಜಕ ಆರ್.ಪಿ.ಶಶಿಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕ ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಜನ್ಮದಿನದ ಅಂಗವಾಗಿ ಶನಿವಾರ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಹುಟ್ಟು ಹಬ್ಬವನ್ನ ಅದ್ಧೂರಿಯಾಗಿ ಆಚರಿಸಲಾಯಿತು.
ನಂತರ ಆರ್.ಪಿ.ಶಶಿಕುಮಾರ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಇಡೀ ದೇಶಕ್ಕೆ ಸಾಕಷ್ಟು ಕೊಡುಗೆಗಳನ್ನು ನೀಡುವ ಜೊತೆಗೆ ದೇಶದ ಜನರ ಸೇವೆಗೆ ಕಂಕಣ ಬದ್ಧರಾಗಿ ಕೆಲಸ ಮಾಡುತ್ತಿದ್ದಾರೆ. ಇಂತಹ ನಾಯಕರ ಮಾರ್ಗದರ್ಶನದಲ್ಲಿ ಮತ್ತು ಅವರ ವಿಚಾರಧಾರೆಗಳನ್ನು ಮೈಗೂಡಿಸಿಕೊಂಡು ಜನರ ಸೇವೆಗೆ ಮುಂದಾಗುತ್ತೇವೆ ಎಂದರು.
ಈ ಸಂದ್ರಭದಲ್ಲಿ ಕಂಪ್ಲಿ ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಕೆ.ಷಣ್ಮುಖಪ್ಪ, ಎನ್.ಹಬೀಬ್ ರೆಹಮಾನ್, ಕೆ.ಎಸ್.ಚಾಂದ್ ಬಾಷಾ, ಉಸ್ಮಾನ್, ಬಿ.ಸಿದ್ದಪ್ಪ, ಸುರೇಶ್‌ಗೌಡ, ವಿರುಪಾಕ್ಷಿ, ರಾಘು, ಅಕ್ಕಿ ಜಿಲಾನ್ ಸುಧಾಕರ್, ಜಾಫರ್, ಆಟೋ ರಘು, ಎಂ.ರಾಜಭಕ್ಷಿ, ಗೋಪಿ, ಉಮೇಶ್ ಗೌಡ, ಗೌಡ್ರು ಸಿದಪ್ಪ, ಶಿವಕುಮಾರ್ ಸೇರಿದಂತೆ ಮುಖಂಡರು, ಕಾರ್ಯಕರ್ತರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!