ಪೊನ್ನಂಪೇಟೆ : ತಾಲೂಕಿನಲ್ಲಿ ಆಯೋಜನೆಗೊಂಡ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು.
ಪೊನ್ನಂಪೇಟೆಯಲ್ಲಿರುವ ಶ್ರೀ ರಾಮಕೃಷ್ಣ ಆಶ್ರಮ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಮಾನ್ಯ ಶಾಸಕರು, ಭಾರತದ ಇತಿಹಾಸದ ಪುಟಗಳನ್ನು ತೆರೆದು ನೋಡಿದರೆ ಅತ್ಯಂತ ಪೌರಾಣಿಕ ಹಿನ್ನೆಲೆಯುಳ್ಳ ಯೋಗಾಸನ ಅಭ್ಯಾಸವು ಮಾನವನ ಆರೋಗ್ಯ ಸುಧಾರಣೆ ಹಾಗೂ ಸದೃಢವಾಗಿರುವಲ್ಲಿ ತುಂಬಾ ಸಹಕಾರಿಯಾಗಲಿದೆ. ಇತ್ತೀಚೆಗಿನ ದಿನಗಳಲ್ಲಿ ವಿಶ್ವಾದ್ಯಂತ ಮನ್ನಣೆ ಪಡೆದಿರುವ ಯೋಗಾಸನವು, ಜನರ ಆರೋಗ್ಯವನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಿಯಮಿತವಾಗಿ ಯೋಗಾಸನವನ್ನು ಮಾಡುತ್ತಾ ಎಲ್ಲರೂ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳು ಬೇಕು ಎಂದು ಮಾನ್ಯ ಶಾಸಕರು ಹೇಳಿದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ಪರಹಿತಾನಂದ ಮಹಾರಾಜಾ ಸ್ವಾಮಿ, ವೇದಿಕೆ ಮೇಲೆ ಉಪಸ್ಥಿತರಿರುವ ಮುಖ್ಯ ಅತಿಥಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ವರದಿ : ಪ್ರಿತುನ್ ಪೂವಣ್ಣ




















