ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಬೆಳವಡಿ ವಡ್ಡರ ಯಲ್ಲಣ್ಣ ವೃತ್ತ ತೆರವು ವಿರೋಧಿಸಿ ಪುರಸಭೆ ಎದುರು ಕಳೆದ ಹತ್ತು ದಿನಗಳಿಂದ ನಡೆದ ಹೋರಾಟದ ನೇತೃತ್ವ ವಹಿಸಿದ್ದ ಅರ್ಜುನ್ ಬಂಡಿವಡ್ಡರ ಸೇರಿದಂತೆ ಮೂವರನ್ನು ಪೊಲೀಸರು ಇಂದು ವಶಕ್ಕೆ ಪಡೆದು ಕೆಲ ಸಮಯದ ನಂತರ ಬಿಡುಗಡೆಗೊಳಿಸಿದರು.
ಇದೇ ತಿಂಗಳ 24 ರಂದು ಮಹಲಿಂಗಾಪುರದಲ್ಲಿ ವಿವಿಧ ಸಂಘಟನೆಗಳ ಬೆಂಬಲದೊಂದಿಗೆ ಬೃಹತ್ ಪ್ರಮಾಣದಲ್ಲಿ ರಸ್ತೆ ತಡೆ ಪ್ರತಿಭಟನೆಗೆ ಕರೆ ನೀಡಲಾಗಿದೆ.
- ಕರುನಾಡ ಕಂದ ಸುದ್ದಿ




















