ಬಳ್ಳಾರಿ / ಕಂಪ್ಲಿ : ತಾಲೂಕಿನ ಎಮ್ಮಿನೂರು ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಖಾದ್ಯ ತೈಲ ಸಂರಕ್ಷಣೆ ಕುರಿತು ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಬ್ಲಾಕ್ ಭಾನುವಾರ ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಬಿ. ಮಂಜುಳಾ ಮಾತನಾಡಿ ಖಾದ್ಯ ತೈಲ ಸಂರಕ್ಷಣೆ ಆಹಾರ ಭದ್ರತೆ ಮತ್ತು ಆರೋಗ್ಯದ ಹಿತದೃಷ್ಟಿಯಿಂದ ಅತ್ಯಂತ ಮಹತ್ವದ್ದಾಗಿದೆ, ಖಾದ್ಯ ತೈಲ ಸಸ್ಯಗಳು ಮತ್ತು ಬೀಜಗಳಿಂದ ದೊರೆಯುತ್ತದೆ ಅಡುಗೆಯ ರುಚಿ, ಪರಿಮಳ ಮತ್ತು ಆರೋಗ್ಯವನ್ನು ಹೆಚ್ಚಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಕೆಬಿ ವೀರೇಶ್, ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಂರಕ್ಷಣಾಧಿಕಾರಿ ಪೂಜಾ, ಬಿಜೆಪಿ ಹಿರಿಯ ಮುಖಂಡರಾದ ಮಹೇಶ ಗೌಡ, ಎಮ್ಮಿಗನೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಟಿ.ರಾಮಪ್ಪ,ಕಂಪ್ಲಿ ಮಂಡಲ ಯುವ ಮೋರ್ಚಾ ಅಧ್ಯಕ್ಷ ಬಡಿಗೇರ್ ವೀರೇಶ, ಎಸ್ ಸಿ ಮೋರ್ಚದ ಪ್ರಧಾನ ಕಾರ್ಯದರ್ಶಿ ಎಚ್. ಪಂಪಾಪತಿ, ಪದಾಧಿಕಾರಿಗಳಾದ ಮಡಿವಾಳರ ವೀರೇಶ, ರಂಗಪ್ಪ, ಸತ್ಯ, ಮಾರುತಿ, ಮಲ್ಲೇಶ ಹಾಗೂ ವಿದ್ಯಾರ್ಥಿಗಳು ಸಿಬ್ಬಂದಿ ವರ್ಗ, ಮಹಿಳೆಯರು ಸೇರಿದಂತೆ ಇತರರು ಹಾಜರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















