ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೈತರ ಬದುಕಿಗೆ ಸೂರ್ಯಕಾಂತಿ ಬೆಳೆ ಆಸರೆ : ಉತ್ತಮ ಇಳುವರಿ ಜೊತೆಗೆ ಲಾಭದ ನಿರೀಕ್ಷೆಯಲ್ಲಿ ಅನ್ನದಾತರು : ಎಲ್ಲೆಲ್ಲೂ ಸೂರ್ಯಕಾಂತಿ ಸೊಬಗು

ಬಳ್ಳಾರಿ / ಕಂಪ್ಲಿ : ರೈತರ ಜೀವನಾಡಿ ತುಂಗಭದ್ರ ಜಲಾಶಯದ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಹಿನ್ನಲೆ ಎರಡನೇ ಬೆಳೆಗೆ ನೀರು ಕಡಿತಗೊಳಿಸಲಾಗಿತ್ತು. ಇದರಿಂದ ರೈತರ ಬದುಕು ಅತತಂತ್ರ ಎನ್ನುವ ಸಂದರ್ಭದಲ್ಲಿ ರೈತರು ಸೂರ್ಯನ ನೆನಪಲ್ಲೇ ಸೂರ್ಯಕಾಂತಿ ಮೊರೆ ಹೋಗುವ ಮೂಲಕ ಇಂದಿನ ದಿನಮಾನದಲ್ಲಿ ರೈತರ ಬದುಕಿಗೆ ಸೂರ್ಯಕಾಂತಿ ಬೆಳೆ ಆಸರೆಯಾಗಿರುವ ಜೊತೆಗೆ ಉತ್ತಮ ಇಳುವರಿಯೊಂದಿಗೆ ರೈತರ ಆರ್ಥಿಕತೆ ವೃದ್ಧಿಗೆ ಕಾರಣವಾಗಿದೆ.
ತಾಲ್ಲೂಕಿನ ನೆಲ್ಲುಡಿ, ಶಾಂತಿನಗರ, ಎಮ್ಮಿಗನೂರು ಭಾಗದಲ್ಲಿ ಎಣ್ಣೆ ಕಾಳು ಬೆಳೆಯಾದ ಸೂರ್ಯಕಾಂತಿ ಫಸಲು ನಳ ನಳಿಸುತ್ತಿದ್ದು, ಅನ್ನದಾತರ ಮುಖದಲ್ಲಿ ಸಂತಸಮೂಡಿದೆ. ಎರಡನೇ ಬೆಳೆಗೆ ನೀರಿಲ್ಲದ್ದರಿಂದ ಕೊಳವೆಬಾವಿ ನೀರು,ತುಂಗಭದ್ರಾ ಬಲದಂಡೆ ಕೆಳಮಟ್ಟದ ಬಿಟ್ಟ ನೀರಿನಿಂದ ರೈತರು ಸೂರ್ಯಕಾಂತಿ ಬೆಳೆದಿದ್ದು,ಇನ್ನು ಕೆಲವೇ ದಿನಗಳಲ್ಲಿ ಕಟಾವಿಗೆ ಬರಲಿದೆ.
ಈ ಭಾಗದಲ್ಲಿ ಸುಮಾರು 1250 ಎಕರೆಗೂ ಅಧಿಕ ಪ್ರದೇಶದಲ್ಲಿ ಸೂರ್ಯಕಾಂತಿ ಬೆಳೆಯಲಾಗಿದೆ. ಮುಂಗಾರು ಹಂಗಾಮಿನಲ್ಲಿ ರೈತರು ಭತ್ತವನ್ನು ಬೆಳೆದಿದ್ದರು. ಜೀವನಾಡಿ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಕಟ್ಟಾಗಿ, ಎಲ್ಲಾ ಕ್ರೆಸ್ಟ್ ಗೇಟ್ ಗಳನ್ನು ಅಳವಡಿಕೆ ಹಿನ್ನೆಲೆಯಲ್ಲಿ ಎರಡನೇ ಬೆಳೆಗೆ ಕಾಲುವೆಗಳಿಗೆ ನೀರನ್ನು ಹರಿಸದ ಕಾರಣ ಡಿಸೆಂಬರಿನಲ್ಲಿ ಕಡಲೆ ಬಿತ್ತನೆ ಮಾಡಿದ್ದರು. ಇತ್ತೀಚೆಗೆ ಕೆಳಮಟ್ಟದ ಕಾಲುವೆಗೆ ನೀರು ಬಿಟ್ಟಾಗ ರೈತರು ಸೂರ್ಯಕಾಂತಿ ಬೆಳೆದಿದ್ದಾರೆ. ಸೂರ್ಯಕಾಂತಿ ಕಟಾವಿನ ಬಳಿಕ ರೈತರು ಮಾಗಿ ಉಳುಮೆ ಮಾಡುತ್ತಾರೆ.ಯಾಕೆಂದರೆ ಸೂರ್ಯಕಾಂತಿ ಬೆಳೆಯ ಎಲೆಗಳು ಮಣ್ಣಿನಲ್ಲಿ ಸೇರುವುದರಿಂದ ಮಣ್ಣಿನ ಫಲವತ್ತತೆ ಅಧಿಕವಾಗಿ, ಮುಂಗಾರು ಹಂಗಾಮಿನ ಭತ್ತದ ಬೆಳೆಗೆ ಅನುಕೂಲವಾಗಲಿದೆ.
ಸೂರ್ಯಕಾಂತಿ ಬೀಜಕ್ಕೆ ನಾಲ್ಕು ಸಾವಿರ ರೂ, ಬಿತ್ತನೆ ಹಾಗೂ ಉಳುಮೆ, ಭೂಮಿಯಲ್ಲಿ ಸ್ವಚ್ಚತೆ ಮಾಡಲು ಮತ್ತು ಸೂರ್ಯಕಾಂತಿ ಬೆಳೆಯ ಕಟಾವು ಸೇರಿದಂತೆ ಒಟ್ಟು 20 ಸಾವಿರ ಖರ್ಚು ಮಾಡಿದ್ದಾರೆ.
ಎಕರೆಗೆ 5 ರಿಂದ 10 ಕ್ವಿಂಟಲ್ ಇಳುವರಿ ಬರುವ ಸಾಧ್ಯತೆ ಇದೆ.ಕನಿಷ್ಠ 8 ಕ್ವಿಂಟಲ್ ಇಲುವರಿ ಬಂದಲ್ಲಿ ಸೂರ್ಯಕಾಂತಿ ಬೆಳೆ ರೈತರಿಗೆ ಲಾಭವನ್ನು ತಂದುಕೊಡಲಿದೆ.

ಎರಡನೇ ಬೆಳೆ ಇಲ್ಲದ ರೈತರು ಕೈಕಟ್ಟಿ ಕುಳಿತುಕೊಂಡಿದ್ದರು. ಆದರೆ, ಅಲ್ಪಸ್ವಲ್ಪ ಕಾಲುವೆ ನೀರು ಮತ್ತು ಮಳೆರಾಯನ ಕೃಪೆಗೆ ಸೂರ್ಯಕಾಂತಿ ಬೆಳೆ ಬೆಳೆದು, ಈಗ ಕಟಾವಿನ ಹಂತಕ್ಕೆ ಬಂದಿರುವುದು ರೈತರ ಮುಖದಲ್ಲಿ ಮಂದಹಾಸ ಮೂಡಿದೆ. ಈಗಾಗಳೇ ಸೂರ್ಯಕಾಂತಿ ಉತ್ತಮ ಇಳುವರಿ ಬಿಡುವ ನಿರೀಕ್ಷೆಯೊಂದಿಗೆ ರೈತರ ಅದಾಯ ದ್ವಿಗುಣವಾಗುವ ಸಾಧ್ಯತೆ ಇದೆ. ಇದರಿಂದ ಎರಡನೇ ಬೆಳೆಯಿಂದ ದೂರವಿದ್ದ ಈ ಭಾಗದ ರೈತರ ಬದುಕು ಕೈಹಿಡಿದಂತಾಗಿದೆ.

  • ಬಸವರಾಜ, ರೈತ, ನೆಲ್ಲುಡಿ.

ಮಣ್ಣಿನ ಫಲವತ್ತೆ ಹೆಚ್ಚಾಗಲು ಸೂರ್ಯಕಾಂತಿ ಬೆಳೆಯಿಂದ ಅನುಕೂಲವಾಗಲಿದೆ. ಜೊತೆಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಆದಾಯ ಸಿಗಲಿದೆ. ರೈತ ಸಂಪರ್ಕ ಕೇಂದ್ರದಲ್ಲಿ ರಿಯಾಯಿತಿದರದಲ್ಲಿ ಸೂರ್ಯಕಾಂತಿ ಬಿತ್ತನೆ ಬೀಜಗಳು ಲಭ್ಯ ಇವೆ.

  • ಟಿ.ಜ್ಯೋತಿ.
    ಪ್ರಭಾರ ಕೃಷಿ ಅಧಿಕಾರಿ. ರೈತ ಸಂಪರ್ಕ ಕೇಂದ್ರ. ಕಂಪ್ಲಿ.

ವರದಿ : ಜಿಲಾನಸಾಬ್ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!