ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಮಕ್ಕಳಿಗಾಗಿ ಸುಲಭ ಶೌಚಾಲಯ ಉದ್ಘಾಟನೆ

ಶಿವಮೊಗ್ಗ : ವಿಶೇಷ ಅಗತ್ಯಗಳಿರುವ ಮಕ್ಕಳ ಅನುಕೂಲಕ್ಕಾಗಿ ನಿರ್ಮಿಸಲಾಗಿರುವ ಸುಲಭ ಪ್ರವೇಶದ ಶೌಚಾಲಯವನ್ನು ನಗರದ ವಿನೋಬಾ ನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಉದ್ಘಾಟಿಸಲಾಯಿತು.
ನಾರಾಯಣ ಹೆಲ್ತ್‌ನ ಸಿಎಸ್‌ಆರ್ (ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ) ಯೋಜನೆಯಡಿ ಈ ಶೌಚಾಲಯವನ್ನು ನಿರ್ಮಿಸಲಾಗಿದ್ದು, ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ, ಶಿವಮೊಗ್ಗ ಇದರ ಬೆಂಬಲ ನೀಡಿದೆ. ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆ ಈ ಯೋಜನೆಯನ್ನು ಅನುಷ್ಠಾನಗೊಳಿಸಿದೆ.
ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆಯ ನಿಕಟಪೂರ್ವ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಸಿಂಗ್ ಅವರು ಈ ಸೌಲಭ್ಯ ವನ್ನು ಉದ್ಘಾಟಿಸಿದರು.

ವಿಶೇಷ ಮಕ್ಕಳ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ವಿನ್ಯಾಸಗೊಳಿಸಲಾದ ಈ ಶೌಚಾಲಯವು ಅವರಿಗೆ ಸುರಕ್ಷಿತ, ಸ್ವಚ್ಛ ಹಾಗೂ ಸುಲಭ ಬಳಕೆಯ ಸೌಲಭ್ಯವನ್ನು ಒದಗಿಸಲಿದೆ. ಶಾಲೆಯಲ್ಲಿನ ವಿಶೇಷ ಅಗತ್ಯಗಳಿರುವ ವಿದ್ಯಾರ್ಥಿಗಳ ದೈನಂದಿನ ಚಟುವಟಿಕೆಗಳಿಗೆ ಇದು ನೆರವಾಗಲಿದ್ದು, ಅವರ ಸ್ವಾವಲಂಬನೆ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸಲು ಸಹಕಾರಿಯಾಗಲಿದೆ ಎಂದು ಸಹ್ಯಾದ್ರಿ ನಾರಾಯಣ ಮಲ್ಟಿಸ್ಪೆಷಲಿಟಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ. ಉತ್ತಮ ಶರ್ಮ ಹೇಳಿದರು.
ಶಾಲಾ ಮಕ್ಕಳಿಗೆ ಸಮಾನ ಅವಕಾಶಗಳು ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಉದ್ದೇಶದಿಂದ ನಾರಾಯಣ ಹೆಲ್ತ್ ಈ ಯೋಜನೆಯನ್ನು ಕೈಗೊಂಡಿದೆ. ಶಿಕ್ಷಣ ಸಂಸ್ಥೆಗಳಲ್ಲಿ ಒಳಗೊಳ್ಳುವಿಕೆ (Inclusivity) ಮತ್ತು ಪ್ರವೇಶಸಾಧ್ಯತೆ (Accessibility) ಹೆಚ್ಚಿಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ್ದಾಗಿವೆ ಎಂದು ಸಂಸ್ಥೆಯ ಮಾರ್ಕೆಟಿಂಗ್ ಹಾಗೂ ಗ್ರೋಥ್ ನ ಕ್ಲಸ್ಟರ್ ಮುಖ್ಯಸ್ಥರು ಶ್ರೀ ರಾಜಾಸಿಂಗ್ ಅವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಾರ್ಕೆಟಿಂಗ್ ವಿಭಾಗದ ಡೆಪ್ಯೂಟಿ ಜನರಲ್ ಮ್ಯಾನೇಜರ್ ಶ್ರೀ ಸಂತ ಕುಮಾರ, ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಸಂಸ್ಥೆಯ ಅಧ್ಯಕ್ಷರು ಶ್ರೀಮತಿ ಅನ್ನಪೂರ್ಣ ರಂಗರಾಜನ್, ಕಾರ್ಯದರ್ಶಿ ಸುಮಾ ಸತೀಶ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಯೊಪಾಧ್ಯಯರು ಕರಿಯಮ್ಮ, ರೋಟರಿ ಕ್ಲಬ್ ಶಿವಮೊಗ್ಗ ದ ಸದಸ್ಯ ಬಸವರಾಜ, ಸಹ್ಯಾದ್ರಿ ನಾರಾಯಣ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಮುಖ್ಯಸ್ಥ ಶ್ರೀ ಶೈಲೇಶ್ ಎಸ್ ಎನ್ ಸೇರಿದಂತೆ ನಾರಾಯಣ ಹೆಲ್ತ್, ಇನ್ನರ್ ವೀಲ್ ಕ್ಲಬ್ ಶಿವಮೊಗ್ಗ ಸೆಂಚುರಿ ಪದಾಧಿಕಾರಿಗಳು, ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!