ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಡಗು ಜಿಲ್ಲಾ ಮೊದಲ ಶರಣ ಸಾಹಿತ್ಯ ಸಮ್ಮೇಳನ – ಮಹಿಳಾ ಸಮಾನತೆ ನಮ್ಮ ಮನೆಯಿಂದಲೇ ಶುರುವಾಗಲಿ ಶಾಸಕ ಡಾ. ಮಂತರ್ ಗೌಡ

ಕುಶಾಲನಗರ: ರೈತ ಸಹಕಾರ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಶರಣ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ೧೨ನೇ ಶತಮಾನದ ಕ್ರಾಂತಿಕಾರಿ ಬಸವಣ್ಣ ಎಲ್ಲರನ್ನು ಸಮಾನರಾಗಿ ಕಂಡಿದ್ದರು. ಅವರು ಹಾಕಿಕೊಟ್ಟ ದಾರಿಯಲ್ಲೇ ಎಲ್ಲರೂ ನಡೆಯಬೇಕು. ಶರಣರು ಇದ್ದಲ್ಲಿ ಸಂಸ್ಕಾರ ಇರುತ್ತದೆ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂಬ ಪ್ರಾಸ್ಥಾವಿಕ ನುಡಿಗಳನ್ನಾಡಿದರು.

ನಂತರ ಶಾಸಕ ಡಾ. ಮಂತರ್ ಗೌಡ ಮಾತನಾಡಿ ೧೨ನೇ ಶತಮಾನದಲ್ಲಿ ರಚನೆಯಾದ ವಚನಗಳು ಇಂದಿನ ಶತಮಾನಕ್ಕೆ ಎಷ್ಟು ತಲುಪಿದೆ ಎನ್ನುದನ್ನು ಚಿಂತಿಸಬೇಕಾಗಿದೆ .ಮಹಿಳಾ ಸಮಾನತೆಯ ಬಗ್ಗೆ ಮಾತನಾಡುವ ಮೊದಲು ಇದು ನಮ್ಮ ನಮ್ಮ ಮನೆಗಳಿಂದ ಶುರುವಾಗಬೇಕು.
ಅಖಿಲ ಭಾರತ ವೀರಶೈವ ಮಹಾಸಭಾದ ಉದ್ದೇಶಿತ ಸಮುದಾಯ ಭವನಕ್ಕೆ ಸರ್ಕಾರದ ವತಿಯಿಂದ ೫೦ಲಕ್ಷ ಕೊಡಿಸಲಾಗುವುದು ಮತ್ತು ಮಹಾಸಭದಿಂದ ೫೦ಲಕ್ಷ ನೀಡಲಾಗುದು ಉಳಿದಂತೆ ದಾನಿಗಳಿಂದ ಭವನದ ನಿರ್ಮಾಣವಾಗಲಿ ದೊಡ್ಡ ಕಟ್ಟಡಗಳನ್ನು ಕಟ್ಟುವುದು ಮುಖ್ಯವಲ್ಲ , ಅವುಗಳ ಉದ್ದೇಶ ಮುಖ್ಯ ಸಮುದಾಯದ ಅಭಿವೃದ್ಧಿಗೆ ಕಾರಣೀಭೂತರಾಗಬೇಕೆಂದು ಮನವಿ ಮಾಡಿದರು.

ವರದಿ : ಪ್ರಿತುನ್ ಪೂವಣ್ಣ ಅಯ್ಯನೆರವಂಡ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!