ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಗೃಹ ಘಟಕಾಧಿಕಾರಿ ಹೆಚ್. ಗಿರಿಧರ್‌ಗೆ ಭಾರತ ಭೂಷಣ ರಾಷ್ಟ್ರ ಪ್ರಶಸ್ತಿ ಪುರಸ್ಕಾರ

ಬಳ್ಳಾರಿ / ಕಂಪ್ಲಿ : ಬುಧವಾರದಂದು ಬಾಗಲಕೋಟೆ ನಗರದ ಲಯನ್ಸ್ ಕ್ಲಬ್‌ನಲ್ಲಿ ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವಿಜಯಪುರ ಜಿಲ್ಲಾ ಪರಿಷತ್ ವತಿಯಿಂದ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಸಿರಿ ಉತ್ಸವ ಹಾಗೂ ರಾಷ್ಟ್ರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭದ್ರತೆ ಸಮಾಜ ಸೇವಾ ಕ್ಷೇತ್ರದಲ್ಲಿನ ಅಪಾರ ಸೇವೆಯನ್ನು ಗುರುತಿಸಿ, ಕಂಪ್ಲಿ ಗೃಹ ರಕ್ಷಕದಳದ ಘಟಕಾಧಿಕಾರಿ ಹೆಚ್.ಗಿರಿಧರ್ ಇವರಿಗೆ 2026ರ ಪ್ರಸ್ತುತ ಭಾರತ ಭೂಷಣ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಪುರಸ್ಕೃತ ಹೆಚ್.ಗಿರಿಧರ್ ಮಾತನಾಡಿ, ಹಲವು ವರ್ಷಗಳಿಂದ ಗೃಹ ರಕ್ಷಕದಳದಲ್ಲಿ ಸೇವೆ ಮಾಡುವ ಜೊತೆಗೆ ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬರಲಾಗಿದೆ. ಎಲೆಮರೆ ಕಾಯಿಯಂತಿರುವ ನಮ್ಮ ಸೇವೆಯನ್ನು ಗುರುತಿಸಿ, ಅಂತರಾಷ್ಟ್ರೀಯ ಹಿಂದೂ ಮಹಾಸಭಾ ಕರ್ನಾಟಕ ವಿಜಯಪುರ ಜಿಲ್ಲಾ ಪರಿಷತ್‌ನವರು ಭಾರತ ಭೂಷಣ ರಾಷ್ಟ್ರ ಪ್ರಶಸ್ತಿ ನೀಡಿರುವುದು ತುಂಬ ಖುಷಿದಾಯಕವಾಗಿದೆ. ಇದರಿಂದ ಇನ್ನಷ್ಟು ಸೇವೆಗೆ ಉತ್ಸುಕನಾಗಿದ್ದೇನೆ. ಇದೇ ತರನಾಗಿ ಇನ್ನೂ ಬಹಳಷ್ಟು ಜನರು ಎಲೆಮರೆ ಕಾಯಿಯಂತೆ ಸೇವೆ ಮಾಡುತ್ತಿದ್ದು, ಅಂತವರನ್ನು ಸಹ ಪ್ರಶಸ್ತಿ ನೀಡಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಸಾಗರ ಆರ್.ಕಲಾದಿಗಿ, ಸಾಹಿತ್ಯ ಕಲಾವಿದ ಡಾ.ಬಸವರಾಜ ಗವಿಮಠ ಸೇರಿದಂತೆ ಗಣ್ಯರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!