ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ

ಬಳ್ಳಾರಿ / ಕಂಪ್ಲಿ : ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಇಲ್ಲಿನ ಕೋಟೆಯ ಶ್ರೀ ಸ್ವಾಮಿ ವಿವೇಕಾನಂದ ಶಾಲೆಯ ಮುಖ್ಯಗುರು ಬಡಿಗೇರ್ ಜಿಲಾನಸಾಬ್ ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಲಸಿಕೆಯಿಂದ ವಂಚಿತರಾಗಬಾರದು ಎಂದು ಹೇಳಿದರು. ಶಾಲಾ ಆವರಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕಂಪ್ಲಿ ಪ್ರಾಥಮಿಕ ಆಸ್ಪತ್ರೆ, ಶ್ರೀ ಸ್ವಾಮಿ ವಿವೇಕಾನಂದ ಶಾಲೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಟ್ಟಣದಲ್ಲಿ ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, ಐದು ವರ್ಷದ ಒಳಗಿನ ಮಕ್ಕಳಿಗೆ ಲಸಿಕೆ ಹಾಕಿಸಬೇಕು, ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ, ಈ ಬಾರಿ ತಪ್ಪದೇ ಮೊದಲ ದಿನದಂದೇ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಲಸಿಕೆ ಹಾಕಿಸಬೇಕು. ಜೂ.28ರಂದು ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತದೆ. ಈ ಅಭಿಯಾನಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದು ತಿಳಿಸಿದರು.
ಶಾಲಾ ಆವರಣದಿಂದ ಆರಂಭಗೊಂಡ ಜಾಗೃತಿ ಜಾಥಾ ಕೋಟೆಯ ಪ್ರಮುಖ ರಸ್ತೆಗಳಲ್ಲಿ ಸಾಗಿ ಶಾಲಾ ಆವರಣದಲ್ಲಿ ಅಂತ್ಯಗೊಂಡಿತು. ಆಶಾ ಕಾರ್ಯಕರ್ತೆ ಆರ್. ವಲಿಮಾ, ಶಿಕ್ಷಕಿಯರಾದ ಕೆ. ಶ್ವೇತಾ, ಜೆ. ಅಕ್ಷತಾ, ಕೊಲ್ಕರ್ ಉಮಾ, ವರ್ಷಾ ಮಜುಂದಾರ್, ಗೌಸಿಯ, ಮಠದ ಸುನೀತಾ, ಡಿ. ಉಮಾ, ಸಹಾಯಕಿ ಶರ್ಮಾಸಬಿ ಸೇರಿದಂತೆ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ವರದಿ : ಕರುನಾಡ ಕಂದ ಪತ್ರಿಕೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!