ಬಳ್ಳಾರಿ / ಕಂಪ್ಲಿ : ಜೂ.28 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಪಟ್ಟಣದಲ್ಲಿ ಸಮುದಾಯ ಆರೋಗ್ಯ ಕೇಂದ್ರದಿಂದ ಜಾಗೃತಿ ಜಾಥಾ ಜರುಗಿತು.
ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ರವೀಂದ್ರ ಕನಕೇರಿ ಜೂ 28 ರಂದು ತಾಲ್ಲೂಕಿನಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಪ್ರತಿಯೊಂದು ಕುಟುಂಬದವರು ತಮ್ಮ 5 ವರ್ಷದೊಳಗಿನ ಮಕ್ಕಳಿಗೆ ಕಡ್ಡಾಯವಾಗಿ ಪೋಲಿಯೋ ಲಸಿಕೆಯನ್ನು ಹಾಕಿಸುವ ಮೂಲಕ ಪೋಲಿಯೋ ಮುಕ್ತ ತಾಲ್ಲೂಕನ್ನಾಗಿ ಮಾಡಲು ಸಹಕರಿಸಬೇಕು. ತಾಲ್ಲೂಕಿನಲ್ಲಿ 15575 ವರ್ಷದೊಳಗಿನ ಮಕ್ಕಳನ್ನು ಗುರುತಿಸಿದ್ದು, ಲಸಿಕೆ ಹಾಕಲು 97 ಲಸಿಕಾ ಕೇಂದ್ರಗಳನ್ನು ರಚಿಸಲಾಗಿದೆ.ಜೂ.28 ರಂದು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸರ್ಕಾರಿ ಆಸ್ಪತ್ರೆಗಳು, ನಮ್ಮ ಕ್ಲಿನಿಕಗಳು, ಅಂಗನವಾಡಿ ಕೇಂದ್ರಗಳಲ್ಲಿ ಮತ್ತು ಆಯ್ದ ಸಾವೇಜನಿಕ ಸ್ಥಳಗಳು ಮತ್ತು ಬಸ್ ನಿಲ್ದಾಣಗಳಲ್ಲಿ ಲಸಿಕೆಯನ್ನು ಹಾಕಲಾಗುವುದು. ನಂತರ ಲಸಿಕೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮನೆ ಮನೆಗೆ ತೆರಳಿ ಲಸಿಕೆಯನ್ನು ಹಾಕಾಲಾಗುವುದು ಎಂದರು.
ಈ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯರ್ತೆಯರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಸಹಕಾರ ನೀಡಬೇಕೆಂದರು.
ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕುರಿತು ಜಾಗೃತಿ ಜಾಥಾ ಜರುಗಿತು. ಕಾರ್ಯಕ್ರಮದಲ್ಲಿ ಡಾ. ಭರತ್ ಪದ್ಮಶಾಲಿ, ಡಾ.ದೇವರಾಜ್, ಡಾ.ಹಾರಿಕಾ, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ. ಶೋಭಾ, ಆರೋಗ್ಯ ನಿರೀಕ್ಷಕ ಎನ್/ಚನ್ನಬಸವರಾಜ್, ಉಪಪ್ರಾಚರ್ಯೆ ಸುಜಾತ ಜತ್ತರ್, ಶಿಕ್ಷಕಿ ಸರೋಜಾ, ಅರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















