ಬಳ್ಳಾರಿ ಜಿಲ್ಲೆಯ ಸಿರಗುಪ್ಪ ನಗರದ ವೈಷ್ಣವಿ ಹೋಟೆಲ್ನಲ್ಲಿ ಇತ್ತೀಚೆಗೆ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಭೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷರಾದ ಶ್ರೀ ಬಂಗ್ಲೆ ಮಲ್ಲಿಕಾರ್ಜುನ ಅವರ ಆದೇಶದ ಮೇರೆಗೆ ಸಿರಗುಪ್ಪ ತಾಲ್ಲೂಕಿನ ಪದಾಧಿಕಾರಿಗಳು,ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸಂಘಟನಾತ್ಮಕ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಸಿರಗುಪ್ಪ ತಾಲ್ಲೂಕಿನ ಉಪಾಧ್ಯಕ್ಷರಾಗಿ ಶ್ರೀ ಕೆ. ನಾಗರುದ್ರ ಅವರನ್ನು ಏಕಮತದಿಂದ ಆಯ್ಕೆ ಮಾಡಲಾಯಿತು.
ಹೊಸದಾಗಿ ಆಯ್ಕೆಯಾದ ಉಪಾಧ್ಯಕ್ಷರಾದ ಶ್ರೀ ಕೆ. ನಾಗರುದ್ರ ಅವರು ಸಂಘಟನೆಯ ಅಭಿವೃದ್ಧಿಗೆ ಶ್ರಮಿಸುವುದಾಗಿ ಹಾಗೂ ಪತ್ರಕರ್ತರ ಹಿತಾಸಕ್ತಿಗಾಗಿ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದರು. ಸಭೆಯಲ್ಲಿ ಸಂಘಟನೆಯ ಇತರ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತಿ ಇದ್ದರು.
ವರದಿ ಎಮ್ .ಡಿ. ಖಾಜಾ




















