ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ.

ಕಾರಟಗಿ : ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸಿಂಗನಾಳ ಗ್ರಾಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿದೆ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಬಿಒಪಿವಿ (ಪೋಲಿಯೋ ಲಸಿಕೆ) ನೀಡುವುದರ ಮೂಲಕ ನಡೆಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ರುದ್ರೇಶ್ ಬಿ ಮಾತನಾಡಿ, ಜೂನ್ 28 ರಿಂದ ಜುಲೈ ಒಂದರವರೆಗೆ ಮೊದಲನೆಯ ಸುತ್ತಿನ ಈ ಕಾರ್ಯಕ್ರಮದ ಮೊದಲನೇ ದಿನ 877 ಪೋಲಿಯೋ ಬೂತ್‌ಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಅಲ್ಲದೆ ಜಿಲ್ಲೆಯ ವಿವಿಧ ಬಸ್ ನಿಲ್ದಾಣಗಳು, ರೈಲ್ವೆ ನಿಲ್ದಾಣಗಳಲ್ಲಿ ಮತ್ತು ಸರ್ಕಲಗಳಲ್ಲಿ ಒಟ್ಟು 59 ಟ್ರಾನ್ಸಿಟ್ ಪೋಲಿಯೋ ಬೂತ್ ಗಳನ್ನು ಮಾಡಲಾಗಿದ್ದು, ಪ್ರಯಾಣ ಮಾಡುವ 0 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡಲಾಗುವುದು ಮತ್ತು ಜಿಲ್ಲೆಯಾದ್ಯಂತ 19 ಮೊಬೈಲ್ ತಂಡಗಳ ಮೂಲಕ ಈಗಾಗಲೆ ಗುರುತಿಸಿರುವ ಹೈರಿಸ್ಟ್ ಏರಿಯಾಗಳಲ್ಲಿ ಇರುವ ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲಾ ಆಡಳಿತ ಮೇರೆಗೆ ಸರಕಾರ ಆದೇಶ ಮಾಡಿದೆ. ಜಿಲ್ಲೆಯ ಸಾರ್ವಜನಿಕರು ತಮ್ಮ 0 ರಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಲಸಿಕೆ ಹಾಕಿಸಿದ್ದರೂ ಸಹ ಈ ದಿನದಂದು (ಜೂ. 28 ಪೋಲಿಯೋ ಭಾನುವಾರ) ತಮ್ಮ ಮನೆಯ ಹತ್ತಿರವೇ ಇರುವ ಪೋಲಿಯೋ ಬೂತ್‌ಗೆ ಭೇಟಿ ನೀಡಿ ಮತ್ತೊಮ್ಮೆ ಪೋಲಿಯೋ ಲಸಿಕೆ ಹಾಕಿಸುವಂತೆ ತಿಳಿಸಿದರು. ನಂತರದಲ್ಲಿ ಶ್ರೀ ಶರಣಪ್ಪ ಎಸ್. ಆರೋಗ್ಯ ನಿರೀಕ್ಷಣಾಧಿಕಾರಿಗಳು ಸಿದ್ದಾಪುರ ಮಾತನಾಡಿ, ಜೊನಸ್ ಎಡ್ವರ್ಡ್ ಸಾಲ್ಕ್ ( ಜನನ ಜೋನಾಸ್ ಸಾಲ್ಕ್ ; ಅಕ್ಟೋಬರ್ 28, 1914 – ಜೂನ್ 23, 1995) ಒಬ್ಬ ಅಮೇರಿಕನ್ ವೈರಾಲಜಿಸ್ಟ್ ಮತ್ತು ವೈದ್ಯಕೀಯ ಸಂಶೋಧಕರು ಮೊದಲ ಯಶಸ್ವಿ ಪೋಲಿಯೊ ಲಸಿಕೆಗಳಲ್ಲಿ ಒಂದನ್ನು ಅಭಿವೃದ್ಧಿಪಡಿಸಿದರು.
ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ
ರಾಷ್ಟ್ರೀಯ ಆರೋಗ್ಯ ಅನ್ವಯ ಪಲ್ಸ್ ಪೊಲೀಯೊ ಕಾರ್ಯಕ್ರಮ ಭಾನುವಾರ ದೇಶದಾದ್ಯಂತ ಜಾರಿಗೊಂಡಿತು. ಐದು ವರ್ಷ ವಯೋಮಿತಿ ಒಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಪೋಲಿಯೊ ಲಸಿಕೆ. ಪೋಷಕರು ತಮ್ಮ ೫ ವರ್ಷದೊಳಗಿನ ಎಲ್ಲಾ ಮಕ್ಕಳನ್ನು ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆದೊಯ್ದು ಲಸಿಕೆ ಹಾಕಿಸಿಕೊಳ್ಳ ಬೇಕು. ದೇಶದಾದ್ಯಂತ ಪಲ್ಸ್ ಲಸಿಕೆ ಹಾಕಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತರಾದ ಹಂಪಮ್ಮ ತಳವಾರ, ಅಂಬಮ್ಮ ಹಟ್ಟಿ, ಅಂಗನವಾಡಿ ಕಾರ್ಯಕರ್ತೆಯರಾದ ಶರಣಮ್ಮ ಜೆ, ಸಹಾಯಕರಾದ ಈರಮ್ಮ ಗ್ರಾಮದ ಪೋಷಕರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!