ನಂಜನಗೂಡು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಂಜನಗೂಡು, ಮೈಸೂರು ಜಿಲ್ಲೆ ಇವರ ವತಿಯಿಂದ ಐದು ವರ್ಷದ ಒಳಗಿನ ಮಕ್ಕಳಿಗೆ ಏಳು ಬಾರಿ ಲಸಿಕೆ ತಪ್ಪದೇ ಹಾಕಿಸಿ ರಾಷ್ಟ್ರೀಯ ಕಾರ್ಯಕ್ರಮವನ್ನು ನೋಡಲ್ ಅಧಿಕಾರಿಗಳಾದ ಡಾಕ್ಟರ್ ಸುವರ್ಣ ಅವರು ಮಕ್ಕಳಿಗೆ ಲಸಿಕೆಯನ್ನು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಇದೊಂದು ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಐದು ವರ್ಷದೊಳಗಿನ ಮಕ್ಕಳಿಗೆ ಏಳು ಬಾರಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ನಿರಂತರ ಗೆಲುವು ನಮ್ಮದಾಗಬೇಕು, ಕಾರ್ಯಕ್ರಮವು ಎಲ್ಲಾ ಹಳ್ಳಿಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಆಸ್ಪತ್ರೆಗಳಲ್ಲಿ ನಡೆಯುತ್ತಿದ್ದು, ಎಲ್ಲಾ ತಾಯಂದಿರು ತಮ್ಮ ಮಕ್ಕಳಿಗೆ ಲಸಿಕೆಯನ್ನು ತಪ್ಪದೇ ಹಾಕಿಸಿ ಪೋಲಿಯೋ ರೋಗವನ್ನು ನಿರ್ಮೂಲನೆ ಮಾಡಬೇಕೆಂದರು.
ಈ ಸಂದರ್ಭದಲ್ಲಿ ತಾಲೂಕು ಆರೋಗ್ಯ ಅಧಿಕಾರಿಗಳು, ನಾಗರಾಜು, ಈಶ್ವರ್ , ಅಶೋಕ ಮುಂತಾದ ಸಿಬ್ಬಂದಿ ವರ್ಗ ಹಾಜರಿದ್ದರು.




















