ಕೊಡಗು : ಕಡಗದಾಳು ಗ್ರಾಮದ ಹೋಂಸ್ಟೇಯೊಂದರಲ್ಲಿ ಅಕ್ರಮ ಜೂಜಾಟ ಪ್ರಕರಣವನ್ನು ಪತ್ತೆ ಹಚ್ಚಿರುವ ಕೊಡಗು ಜಿಲ್ಲಾ ಪೊಲೀಸರು, 28 ಮಂದಿಯನ್ನು ವಶಕ್ಕೆ ಪಡೆದು ೧೧ ಲಕ್ಷ ರೂ. ನಗದು ಸೇರಿದಂತೆ ವಿವಿಧ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಸರಕಾರದ ಪರವಾನಗಿಯಿಲ್ಲದೆ ಹಣವನ್ನು ಪಣವಾಗಿಟ್ಟುಕೊಂಡು ಅಕ್ರಮವಾಗಿ ಜೂಜಾಟ ನಡೆಸುತ್ತಿರುವ ಕುರಿತು ದೊರೆತ ಖಚಿತ ಮಾಹಿತಿ ಹಿನ್ನೆಲೆಯಲ್ಲಿ, ಮಡಿಕೇರಿ ಉಪವಿಭಾಗ ಮಟ್ಟದ ಅಪರಾಧ ಪತ್ತೆ ವಿಶೇಷ ತಂಡದ ಅಧಿಕಾರಿ ಹಾಗೂ ಸಿಬ್ಬಂದಿಗಳು ಇಂದು ದಾಳಿ ನಡೆಸಿದರು. ಮಂಡ್ಯ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲಾ ಮೂಲದ ಆರೋಪಿಗಳ ಸಹಿತ ಸ್ಥಳದಲ್ಲಿದ್ದ 11,08,130 ರೂ. ನಗದು, ೫ ಕಾರು, ೧ ದ್ವಿಚಕ್ರ ವಾಹನ, ೩೮ ಮೊಬೈಲ್ ಫೋನ್‌ಗಳನ್ನು ವಶ ಪಡಿಸಿಕೊಂಡಿದ್ದಾರೆ. ಡಿವೈಎಸ್ಪಿ ಸೂರಜ್.ಪಿ.ಎ. ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕ ಚಂದ್ರಶೇಖರ್ ಹೆಚ್.ವಿ., ಮಡಿಕೇರಿ ಉಪವಿಭಾಗದ ಅಪರಾಧ ತನಿಖಾ ದಳದ ಅಧಿಕಾರಿಗಳು ಹಾಗೂ ಸಿಬ್ಬಂಧಿಗಳು ಪಾಲ್ಗೊಂಡಿದ್ದರು.
ವರದಿ: ಪ್ರಿತುನ್ ಪೂವಣ್ಣ




















