
ಬಳ್ಳಾರಿ / ಕಂಪ್ಲಿ: ತಾಲೂಕಿನ ಎಮ್ಮಿಗನೂರು ಗ್ರಾಮದಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಬಿಎಲ್‌ಒಗಳ ಸಮ್ಮುಖದಲ್ಲಿ ಮನೆ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯಿತು.
ನಂತರ ಭಾರತೀಯ ಜನತಾ ಪಾರ್ಟಿ ಕಂಪ್ಲಿ ಮಂಡಲದ ಯುವ ಮೋರ್ಚದ ಅಧ್ಯಕ್ಷ ಎಮ್ಮಿಗನೂರು ವಿರೇಶ ಬಡಿಗೇರ್ ಮಾತನಾಡಿ, ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗವೂ ಮತದಾರರ ಪಟ್ಟಿಯಲ್ಲಿರುವ ಕೆಲ ನಕಲಿ ಮತದಾರರನ್ನು ಮತ್ತು ಬೇರೆ ಬೇರೆ ಕಡೆಗಳಲ್ಲಿರುವ ಮತದಾರರನ್ನು ತೆಗೆಯಲು ಮತದಾರರ ಪರಿಷ್ಕರಣೆ (ಎಸ್‌ಐಆರ್) ಮಾಡಲಾಗುತ್ತಿದೆ. ಅಧಿಕಾರಿಗಳು ಪ್ರತಿ ಮನೆಗೂ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡುತ್ತಿದ್ದಾರೆ. ಇದರಲ್ಲಿ ಹೊಸ ಮತದಾರರ ಸೇರ್ಪಡೆ, ಮೃತಪಟ್ಟವರ ಹಾಗೂ ಸ್ಥಳಾಂತರಗೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದಯ ಹಾಕಲಾಗುತ್ತದೆ. ಪ್ರಜಾಪ್ರಭುತ್ವದ ಯಶಸ್ಸಿಗೆ ನಿಖರವಾದ ಮತದಾರರ ಪಟ್ಟಿ ಅತ್ಯವಶ್ಯಕವಾಗಿದೆ. ರಾಜ್ಯಾದ್ಯಂತ ಆರಂಭವಾಗಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ 18 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಸಕ್ರಿಯವಾಗಿ ಭಾಗವಹಿಸಬೇಕು. ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ ಹಾಗೂ ಇತರೆ ವಿವರಗಳನ್ನು ಪರಿಶೀಲಿಸಿ ಅಗತ್ಯ ತಿದ್ದುಪಡಿಗಳನ್ನು ಮಾಡಿಸಿಕೊಳ್ಳಬೇಕು. ಎಸ್‌ಐಆರ್ ಸಮಗ್ರ ಪರಿಷ್ಕರಣ ಕಾರ್ಯಕ್ರಮಕ್ಕೆ ಸಾರ್ವಜನಿಕರು ಸಹಕರಿಬೇಕು ಎಂದರು.
ಈ ಸಂದರ್ಭದಲ್ಲಿ ಬಿಎಲ್2 ಅಂಗನವಾಡಿ ಶಿಕ್ಷಕಿ ಜಡೆಮ್ಮ, ಮಂಡಲ ಪ್ರಧಾನ ಕಾರ್ಯದರ್ಶಿ ಫಕೀರಪ್ಪ, ಉಪಾಧ್ಯಕ್ಷ ಶರಣಗೌಡ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















