ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶಾಸಕ ಗಣೇಶಗೆ ಸಚಿವ ಸ್ಥಾನ ಲಭಿಸಲೆಂದು ಧೀರ್ಘದಂಡ ನಮಸ್ಕಾರದ ಹಾಕಿದ ಉಪಾಧ್ಯಕ್ಷೆ ಶ್ರೀದೇವಿ ಹೊನ್ನಳ್ಳಿ

ಬಳ್ಳಾರಿ / ಕಂಪ್ಲಿ: ಸ್ಥಳೀಯ ಶಾಸಕ ಜೆ.ಎನ್.ಗಣೇಶ್‌ಗೆ ಸಚಿವ ಸ್ಥಾನ ಸಿಗಲೆಂದು, ಕಂಪ್ಲಿ ಬ್ಲಾಕ್ ಕಾಂಗ್ರೆಸ್ ಮಹಿಳಾ ಘಟಕದ ಉಪಾಧ್ಯಕ್ಷೆ ಶ್ರೀದೇವಿ ಹೊನ್ನಳ್ಳಿ ಇವರು ಪಟ್ಟಣದಲ್ಲಿ ಧೀರ್ಘದಂಡ ನಮಸ್ಕಾರ ಸಲ್ಲಿಸಿದರು.
ಇಲ್ಲಿನ ಉದ್ಭವ ದೇವಸ್ಥಾನದಿಂದ ಶುಕ್ರವಾರ ಬೆಳಗಿನ ಜಾವದಲ್ಲಿ ಧೀರ್ಘದಂಡ ನಮಸ್ಕಾರ ಹಾಕುತ್ತಾ, ನಡುವಲ ಮಸೀದಿ, ಡಾ.ರಾಜಕುಮಾರ ಮುಖ್ಯರಸ್ತೆ ಮೂಲಕ ಗ್ರಾಮದ ದೇವತೆ ಮಾರೆಮ್ಮ ದೇವಸ್ಥಾನವರೆಗೆ ಹಾಕಿದರು. ತನ ದಂತರ ದೇವಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಶಾಸಕ ಗಣೇಶ್‌ಗೆ ಸಚಿವ ಸ್ಥಾನ ಲಭಿಸಲೆಂದು ಕೋರಿದರು.
ತದನಂತರ ಶ್ರೀದೇವಿ ಹೊನ್ನಳ್ಳಿ ಮಾತನಾಡಿ, ಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾರ್ಯಗಳೊಂದಿಗೆ ಜನಪರ ಸೇವೆ ಮಾಡಿದ್ದಾರೆ. ಮತ್ತು ಪ್ರತಿಯೊಂದು ಹಂತದಲ್ಲಿ ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಸೌಲಭ್ಯಗಳನ್ನು ಕಲ್ಪಿಸುತ್ತಿದ್ದಾರೆ. ಆದ್ದರಿಂದ ಇಂತಹ ಶಾಸಕರಿಗೆ ಸಚಿವ ಸ್ಥಾನ ಸಿಕ್ಕರೆ, ಕ್ಷೇತ್ರ ಸೇರಿದಂತೆ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ಆಗಲು ಸಾಧ್ಯ. ಈ ನಿಟ್ಟಿನಲ್ಲಿ ವರಿಷ್ಠರು, ಹೈಕಮಾಂಡ್ ಗಮನ ಹರಿಸಿ, ಸಚಿವ ಸ್ಥಾನ ನೀಡಬೇಕು ಎಂದರು.
ಈ ಸಂದರ್ಭದಲ್ಲಿ ಅನೇಕ ಮಹಿಳೆಯರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!