ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವರದಿ ಫಲಶೃತಿ : ಜೆಸ್ಕಾಂ ಕಚೇರಿ ಕಟ್ಟಡ ಕಾಮಗಾರಿ ಅಂತು ಇಂತು ಆರಂಭ

ಜೆಸ್ಕಾಂ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಗ್ರಹಣ : ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ಕಾಮಗಾರಿಗೆ ಸ್ಥಗಿತ ಎಂಬ ಬರಹದ ಅಡಿಯಲ್ಲಿ ಪ್ರಕಟಗೊಂಡಿದ ಸುದ್ದಿಗೆ ಎಚ್ಚೆತ್ತ ಅರಣ್ಯ ಇಲಾಖೆ ಕಟ್ಟಡಕ್ಕೆ ಗ್ರೀನ್ ಸಿಗ್ನಲ್ ನೀಡಿದೆ

ಬಳ್ಳಾರಿ / ಕಂಪ್ಲಿ: ಪಟ್ಟಣದ ಜೆಸ್ಕಾಂ ಉಪವಿಭಾಗ ಎಇಇ ನೂತನ ಕಚೇರಿ ಅರಂಭಕ್ಕೆ ಅರಣ್ಯ ಇಲಾಖೆಯ ನಿಧಾನಗತಿಯಿಂದಾಗಿ ಕಟ್ಟಡ ನಿರ್ಮಾಣಕ್ಕೆ ಅಡಚಣೆಯಾಗಿತ್ತು. ಆದರೆ, ಇದೀಗ ಅರಣ್ಯ ಇಲಾಖೆ ಕಚೇರಿ ಕಟ್ಟಡ ನಿರ್ಮಾಣದ ಸ್ಥಳದಲ್ಲಿದ್ದ 10ಕ್ಕೂ ಅಧಿಕ ಗಿಡ ಮರಗಳನ್ನು ತೆರವುಗೊಳಿಸಲು ಅನುಮತಿ ನೀಡಿದ್ದು, ಹಾಗೂ ಅಲ್ಲಿನ ಗಿಡಮರಗಳನ್ನು ತೆರವುಗೊಳಿಸಿದ್ದರಿಂದ ಕಚೇರಿ ಕಟ್ಟಡ ನಿರ್ಮಾಣಕ್ಕಿದ್ದ ಗ್ರಹಣ ಬಿಟ್ಟಿದ್ದು, ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿ ಇಂದಿನಿಂದ ಆರಂಭಗೊಂಡಿದೆ.
ದೇವರು ಕೊಟ್ಟರೂ ಪೂಜಾರಿ ವರ ಕೊಡಲಿಲ್ಲ ಎನ್ನುವಂತೆ ಕಂಪ್ಲಿ ಕ್ಷೇತ್ರದ ಶಾಸಕರು ತಾಲ್ಲೂಕು ಕೇಂದ್ರದಲ್ಲಿ ಜೆಸ್ಕಾಂ ಇಲಾಖೆಯ ತಾಲ್ಲೂಕು ಮಟ್ಟದ ಕಚೇರಿ ಆರಂಭಕ್ಕೆ ಅನುದಾನ ಮಂಜೂರು ಮಾಡಿಸಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆಯನ್ನು ನೆರವೇರಿಸಿ ತಿಂಗಳುಗಳೇ ಅಗಿದ್ದರೂ ಸಹಿತ ಸ್ಥಳದಲ್ಲಿದ್ದ ಗಿಡಮರಗಳನ್ನು ತೆರವುಗೊಳಿಸುವ ವಿಚಾರ ನೆನೆಗುದಿಗೆ ಬಿದ್ದಿತ್ತು. ಗಿಡಮರಗಳನ್ನು ತೆರವುಗೊಳಿಸಲು ಒಪ್ಪಿಗೆ ಸೂಚಿಸಲು ಅರಣ್ಯ ಇಲಾಖೆ ಮೀನಾಮೇಷ ಮಾಡಿದ್ದರಿಂದ ಕಚೇರಿ ಕಟ್ಟಡ ನಿರ್ಮಾಣಕ್ಕೆ ಗ್ರಹಣ ಬಡಿದಿತ್ತು. ಇದರಿಂದಾಗಿ ಗುತ್ತಿಗೆದಾರರು ಆತಂಕ ಪಡುವಂತಾಗಿತ್ತು.
2024 ಆ.9ರಂದು ಸ್ಥಳೀಯ ಜೆಸ್ಕಾಂ ಸಹಾಯಕ ಇಂಜಿನಿಯರ್ (ವಿ) ಕಾರ್ಯಪಾಲನಾ ಶಾಖೆಯನ್ನು ಉಪವಿಭಾಗ (ಎಇಇ) ಕಚೇರಿಯನ್ನಾಗಿ ಉನ್ನತೀಕರಿಸಲಾಗಿತ್ತು. ಆದರೆ, ಉನ್ನತೀಕರಣಗೊಂಢು ಎರಡು ವರ್ಷಗಳಾದರೂ ಎಇಇ ಕಚೇರಿಗೆ ಪ್ರತ್ಯೇಕ ಕಟ್ಟಡ ಇಲ್ಲದ ಕಾರಣ ಸಹಾಯಕ ಇಂಜಿನಿಯರ್ ಕಾರ್ಯಪಾಲನಾ ಕಚೇರಿ ಕಟ್ಟಡದಲ್ಲಿಯೇ ಕಾರ್ಯ ನಿರ್ವಹಿಸುತ್ತಿತ್ತು. ಕಂಪ್ಲಿ ಜೆಸ್ಕಾಂ ಇಲಾಖೆಗೆ ಪ್ರತ್ಯೇಕ ಎಇಇ ಕಚೇರಿಯ ಅಗತ್ಯತೆಯನ್ನು ಅರಿತ ಶಾಸಕರಾದ ಜೆ.ಎನ್.ಗಣೇಶ ಅವರು 2025-26ನೇ ಸಾಲಿನ ಜೆಸ್ಕಾಂ ಅನುದಾನದ ಯೋಜನೆಯಡಿಯಲ್ಲಿ 1.50.ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಕ್ಕೆ 2026 ಏ.18ರಂದು ಭೂಮಿ ಪೂಜೆಯನ್ನು ನೆರವೇರಿಸಿದ್ದರು. ಆದರೆ, ಅರಣ್ಯ ಇಲಾಖೆಯ ನಿಧಾನಗತಿಯಿಂದಾಗಿ ಕಚೇರಿ ನಿರ್ಮಾಣ ನೆನೆಗುದಿಗೆ ಬಿದ್ದಿತ್ತು. ಇತ್ತೀಚೆಗೆ ಪತ್ರಿಕೆಯಲ್ಲಿ ಎಇಇ ಕಚೇರಿ ಕಟ್ಟಡ ನಿರ್ಮಾಣಕ್ಕೆ ಗ್ರಹಣ ಎನ್ನುವ ವಿಸ್ತೃತ ವರದಿ ಪ್ರಕಟಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ. ಪತ್ರಿಕೆಯ ವರದಿ ಫಲಶೃತಿಯಿಂದಾಗಿ ಈಗ ಕಚೇರಿ ನಿರ್ಮಾಣಕ್ಕೆ ಜೆಸ್ಕಾಂ ಇಲಾಖೆ ಅಧಿಕಾರಿಗಳು ಮತ್ತು ಗುತ್ತಿಗೆದಾರರು ಮಾರ್ಕಿಂಗ್ ಮಾಡುವ ಮೂಲಕ ಚಾಲನೆ ನೀಡಿದ್ದು, ಶೀಘ್ರದಲ್ಲಿ ಕಚೇರಿ ಕಟ್ಟಡ ನಿರ್ಮಾಣ ಮಾಡುವ ಭರವಸೆಯನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಜೆಸ್ಕಾಂ ಇಲಾಖೆಯ ಇಇ ಖಾಜ ಮೋಹಿದ್ದೀನ್, ಸಂತೋಷ್, ಕೆ.ಶ್ರೀನಿವಾಸಪ್ರಸಾದ್, ಗುತ್ತಿಗೆದಾರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!