ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿ ಜನ್ಮದಿನಾಚರಣೆ

ಬಳ್ಳಾರಿ / ಕಂಪ್ಲಿ : ಪಟ್ಟಣದ ಕೊಟ್ಟಾಲ್ ರಸ್ತೆಯ ಮಾಜಿ ಶಾಸಕ ಟಿ.ಎಚ್.ಸುರೇಶ್ ಬಾಬು ಅವರ ನಿವಾಸದ ತುಂಗಭದ್ರಾ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿಯ ಸಂಸ್ಥಾಪಕ ಹಾಘೂ ಹಿರಿಯ ರಾಜಕಾರಣಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಅವರ ಜನ್ಮದಿನವನ್ನು ಸೋಮವಾರ ಅರ್ಥಪೂರ್ಣವಾಗಿ ಆಚರಿಸಿದರು.
ನಂತರ ಕಂಪ್ಲಿ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಬಿಎಲ್‌ಎ1 ಗುರ್ತಿ ಶ್ರೀನಿವಾಸ ಮಾತನಾಡಿ, ಜಗತ್ತಿಗೆ ಸಾಕಷ್ಟು ಕೊಡುಗೆಗಳನ್ನು ನೀಡಿದ್ದಾರೆ. ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ನಡೆಸಬೇಕು. ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣ ಕೊಡಿಸಿದಾಗ ಮಾತ್ರ ದೇಶದ ಉತ್ತಮ ಪ್ರಜೆಗಳಾಗಿ ಹೊರ ಹೊಮ್ಮಲು ಸಾಧ್ಯ. ಬಿಜೆಪಿ ಪಕ್ಷ ವಿಶ್ವದಲ್ಲೇ ಅತಿಹೆಚ್ಚು ಸದಸ್ಯತ್ವ ಹೊಂದಲು ಭದ್ರ ಬುನಾದಿ ಹಾಕಿಕೊಟ್ಟವರು ಧೀಮಂತ ನಾಯಕ ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯಾಗಿದ್ದಾರೆ. ಅವರು ರಾಜಕೀಯ ಚತುರರಾಗಿದ್ದರು. ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದು, ನಮ್ಮ ದೇಶದ ಸರ್ವತೋಮುಖ ಬೆಳವಣಿಗೆಗೆ ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಮಾಡಿದ ಕಾರ್ಯಗಳು ಸ್ಮರಣೀಯ ಎಂದರು.
ಇಲ್ಲಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಕಂಪ್ಲಿ ಮಂಡಲ ಅಧ್ಯಕ್ಷ ಸಿ.ಡಿ.ಮಹಾದೇವ, ಮುಖಂಡರಾದ ಅಳ್ಳಳ್ಳಿ ವಿರೇಶ, ಎಸ್.ಚಂದ್ರಶೇಖರಗೌಡ, ಬಂಡಿ ಸಿದ್ದಪ್ಪ, ಮನೋಜ್‌ಗೌಡ, ಪಕ್ಕೀರಪ್ಪ, ಪ್ರಶಾಂತ್, ಬಸವಪ್ರಭು, ಕಟ್ಟೆ ವಿಶ್ವ, ಮುರಳಿರೆಡ್ಡಿ,ಅಶೋಕ, ಬಿ. ರಮೇಶ, ಎಸ್.ಆರ್.ಕಾರ್ತಿಕ, ಭಾಸ್ಕರ್, ವಿರುಪಾಕ್ಷಿ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!