ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖ್ಯಗುರು ಎಂ. ಎ. ಶರಣಬಸವರಾಜ, ದೈಹಿಕ ಶಿಕ್ಷಕ ಕೆ.ಸಂತೋಷಕುಮಾರ್‌ಗೆ ಜಿಲ್ಲಾ ಮಟ್ಟದ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ ಪುರಸ್ಕಾರ

ಬಳ್ಳಾರಿ / ಕಂಪ್ಲಿ : ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಮತ್ತು ಶಿಕ್ಷಣ ಇಲಾಖೆಯ ಸಂಯೋಗದಲ್ಲಿ ಬಳ್ಳಾರಿ ನಗರದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ಅನುದಾನರಹಿತ ಶಾಲೆಗಳ ಪ್ರಾಥಮಿಕ ವಿಭಾಗದಲ್ಲಿ ಕಂಪ್ಲಿಯ ಪ್ರತಿಷ್ಠಿತ ವಿದ್ಯಾಸಾಗರ ಇಂಟರ್‌ನ್ಯಾಷನಲ್ ಶಾಲೆಯ ಮುಖ್ಯಗುರು ಎಂ.ಎ.ಶರಣಬಸವರಾಜ ಮತ್ತು ಪ್ರೌಢಶಾಲಾ ವಿಭಾಗದಲ್ಲಿ ಕಂಪ್ಲಿ ಕ್ವೀನ್ ಮೇರಿ ಶಾಲೆಯ ದೈಹಿಕ ಶಿಕ್ಷಕ ಕೆ.ಸಂತೋಷಕುಮಾರ್ ಇವರಿಗೆ 2025-26ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ದೈಹಿಕ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ನಂತರ ಪ್ರಶಸ್ತಿ ಪುರಸ್ಕೃತ ಎಂ.ಎ.ಬಸವರಾಜ, ಕೆ.ಸಂತೋಷ್ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವುದನ್ನು ಪರಿಗಣಿಸಿ, ಈ ಪ್ರಶಸ್ತಿ ನೀಡಿದ್ದು, ಇನ್ನಷ್ಟು ಸೇವೆಗೆ ಉತ್ಸಾಹ ಹೆಚ್ಚಿಸಿದೆ. ಶಿಕ್ಷಣ ಎಂಬುವುದು ಹುಲಿಯ ಹಾಲಿದ್ದಂತೆ, ಅದನ್ನು ಕುಡಿದವರು ಘರ್ಜಿಸಲೇಬೇಕು ಎನ್ನುವ ಹಾಗೇ ಶಿಕ್ಷಣ ಪಡೆದ ಪ್ರತಿಯೊಂದು ಘರ್ಜಿಸುವ ಜೊತೆಗೆ ಜೀವನ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ.
ಈ ನಿಟ್ಟಿನಲ್ಲಿ ಪೋಷಕರು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.
ಈ ಸಂದರ್ಭದಲ್ಲಿ ಕುರುಗೋಡು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಪದ್ಮ ರೆಡ್ಡಿ ಮತ್ತು ಜಿಲ್ಲಾ, ತಾಲೂಕು ಅಧ್ಯಕ್ಷರು ಹಾಗೂ ವಿವಿಧ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!