ಬೈಲಹೊಂಗಲ ನಗರ ವ್ಯಾಪ್ತಿಯಲ್ಲಿ ನಗರಸಭೆ ವತಿಯಿಂದ ಪರಿಶೀಲನೆ ಕೈಗೊಂಡು ಶಿಥಿಲಾವಸ್ಥೆಯಲ್ಲಿರುವ / ಬೀಳುವ ಸ್ಥಿತಿಯಲ್ಲಿರುವ ಕಟ್ಟಡಗಳನ್ನು ಗುರುತಿಸಿ, ಅವುಗಳಲ್ಲಿ ವಾಸಿಸುವ ನಿವಾಸಿಗಳು ಹಾಗೂ ಸಾರ್ವಜನಿಕರ ಜೀವ ಮತ್ತು ಆಸ್ತಿಗೆ ಅಪಾಯ ಉಂಟಾಗುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಕಟ್ಟಡಗಳ ಮಾಲೀಕರು ಹಾಗೂ ನಿವಾಸಿಗಳಿಗೆ ನಗರಸಭೆಯಿಂದ ನೋಟಿಸ್ ಜಾರಿಗೊಳಿಸಿ ಬೀಳುವ ಸ್ಥಿತಿಯಲ್ಲಿರುವ ಕಟ್ಟಡವನ್ನು ಖಾಲಿ ಮಾಡಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಅಥವಾ ನಗರಸಭೆ ವ್ಯಾಪ್ತಿಯಲ್ಲಿನ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆಯುವಂತೆ ಹಾಗೂ ಯಾವುದೇ ತುರ್ತು ಸಂದರ್ಭಗಳಲ್ಲಿ ದೂರು ಮತ್ತು ಸಹಾಯಕ್ಕಾಗಿ ನಗರಸಭೆಯ ಸಹಾಯವಾಣಿ ಸಂಖ್ಯೆ 08288-233135 ಗೆ ಸಂಪರ್ಕಿಸುವಂತೆ ಸಾರ್ವಜನಿಕರಲ್ಲಿ ಪೌರಾಯುಕ್ತರಾದ ಶ್ರೀಮತಿ ಭಾಗ್ಯಶ್ರಿ ಆರ್. ಹುಗ್ಗಿ ರವರು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿರುತ್ತಾರೆ.
ವರದಿ ಮಂಜು ಎಂ.ಚಿಕ್ಕಣ್ಣವರ




















