ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ : ಪಿ.ಮೂಕಯ್ಯಸ್ವಾಮಿ

ಬಳ್ಳಾರಿ / ಕಂಪ್ಲಿ : ದೇಶದ ಸಮಗ್ರವಾದ ಅಭಿವೃದ್ಧಿಯಲ್ಲಿ ಸಹಕಾರ ಸಂಘಗಳ ಪಾತ್ರವು ಅತ್ಯಂತ ಮಹತ್ವದ್ದಾಗಿದೆ ಎಂದು ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಪಿ.ಮೂಕಯ್ಯಸ್ವಾಮಿ ತಿಳಿಸಿದರು.
ಅವರು ಪಟ್ಟಣದ ವೀರಶೈವ ಸಂಘದ ಶಾರದಾ ಶಾಲೆ ಆವರಣದಲ್ಲಿ ಸ್ಥಳೀಯ ವರಲಕ್ಷ್ಮೀ ಕ್ರೆಡಿಟ್ ಸಹಕಾರ ಸಂಘ, ರಾಜ್ಯ ಸಹಕಾರ ಮಹಾಮಂಡಳಿ, ಸಹಕಾರ ಇಲಾಖೆ, ಜಿಲ್ಲಾ ಸಹಕಾರ ಯೂನಿಯನ್ಸ ಸಹಯೋಗದಲ್ಲಿ ಏರ್ಪಡಿಸಿದ್ದ ಅಂತರಾಷ್ಟ್ರೀಯ ಸಹಕಾರದಿನದ ಅಂಗವಾಗಿ ಏರ್ಪಡಿಸಿದ್ದ ಕ್ಷೇತ್ರ ಕುರಿತ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ದೇಶದಲ್ಲಿ 8.52. ಲಕ್ಷ ಸಹಕಾರ ಸಂಘಗಳಿದ್ದು, 32 ಕೋಟಿ ಜನ ಸದಸ್ಯರಿದ್ದಾರೆ. ಸಹಕಾರಿ ಸಂಘಗಳಿಂದ ದೇಶದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ವರದಾನವಾಗಿದೆ, ಕೇಂದ್ರದಿಂದ ನೇರವಾಗಿ ರೈತರಿಗೆ ಏಕರೂಪದಲ್ಲಿ ಸಾಲ ವಿತರಿಸುವ ಯೋಜನೆ ಮೂಲಕ ಅಭಿವೃದ್ಧಿಗೆ ಒತ್ತು ನೀಡಲು ಉದ್ದೇಶಿಸಲಾಗಿದೆ. ದೇಶದಲ್ಲಿ 2 ಲಕ್ಷ ಹೊಸ ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಗ್ರಾಮೀಣ ಪ್ರದೇಶದಲ್ಲಿ ಆರಂಭಿಸಲು ಕೇಂದ್ರ ಸಹಕಾರ ಇಲಾಖೆ ಯೋಜನೆ ರೂಪಿಸಿದೆ ಎಂದರು.
ಅಂತರಾಷ್ಟ್ರೀಯ ಸಹಕಾರ ದಿನದ ಸ್ಮರಣಾರ್ಥ ಸಸಿಗಳನ್ನು ಅವರಣದಲ್ಲಿ ನೆಡಲಾಯಿತು. ವರಲಕ್ಷ್ಮೀ ಸಹಕಾರ ಸಂಘದ ಅಧ್ಯಕ್ಷ ಎಚ್.ಜಗದೀಶ್ ಅಧ್ಯಕ್ಷತೆವಹಿಸಿದ್ದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಸಹಕಾರ ಯೂನಿಯನ್ ನಿರ್ದೇಶಕ ಎಚ್.ವೀರಶೇಖರಗೌಡ, ಬಳ್ಳಾರಿ ವಿಜಯನಗರ ಜಿಲ್ಲೆಗಳ ಸಹಕಾರ ಸಂಘಗಳ ಉಪನಿಬಂಧಕ ಜೆ.ಎಂ.ವೀರಭದ್ರಯ್ಯ, ಉಪನ್ಯಾಸಕ ಕೆ.ಎಚ್. ಮಂಜುನಾಥ್, ವರಲಕ್ಷ್ಮೀ ಸಹಕಾರ ಸಂಘದ ಮುಖ್ಯಕಾರ್ಯನಿರ್ವಾಹಕ ಲೋಕೇಶ್ ರೆಡ್ಡಿ, ಸಹಕಾರ ಸಂಘಗಳ ವ್ಯವಸ್ಥಾಪಕರು, ನಿರ್ದೇಶಕರು, ಸಿಬ್ಬಂದಿಗಳು ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!