ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಎಸ್ಐಆರ್ ವಿರುದ್ದ ಪ್ರತಿಭಟನೆ

ಮಡಿಕೇರಿ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ
ಎಸ್ಐಆರ್‍ನಲ್ಲಿ ಅಗತ್ಯ ದಾಖಲೆಗಳಿಲ್ಲದ ಕಾರಣ ಜಿಲ್ಲೆಯ ಆದಿವಾಸಿ, ದಲಿತ ಮತ್ತು ಬಡ ಸಮುದಾಯದ ಸುಮಾರು ಏಳು ಸಾವಿರ ಜನರು ಮತದಾನದ ಹಕ್ಕಿನಿಂದ ವಂಚಿತರಾಗುವ
ಭೀತಿ ಇದೆ. ಇದನ್ನು ಖಂಡಿಸಿ ಸಿಐಟಿಯು, ಆದಿವಾಸಿಗಳ ಹಕ್ಕುಗಳ ಸಮನ್ವಯ ಸಮಿತಿ ಮತ್ತು ಕೃಷಿ ಕೂಲಿ ಕಾರ್ಮಿಕರ ಸಂಘದ ನೇತೃತ್ವದಲ್ಲಿ ನೂರಾರು ಮಂದಿ ಜಿಲ್ಲಾಧಿಕಾರಿಗಳ
ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಮತದಾನದ ಹಕ್ಕು ಉಳಿಸಿ” ಎಂಬ ಘೋಷಣೆ ಕೂಗಿದ ಪ್ರತಿಭಟನಾಕಾರರು, ಎಸ್ಐಆರ್ ಜನರನ್ನು ಮತದಿಂದ ಹೊರಗಿಡುವ ಪ್ರಯತ್ನವಾಗಿದೆ ಎಂದು ಆರೋಪಿಸಿದರು. ಸಿಪಿಐ ಜಿಲ್ಲಾ ಕಾರ್ಯದರ್ಶಿ ಪಿ.ಆರ್.ಭರತ್ ಮಾತನಾಡಿ, ಚುನಾವಣಾ ಆಯೋಗಕ್ಕೆ ಮತದಾರರ ಪೌರತ್ವ ಪ್ರಶ್ನಿಸುವ ಅಧಿಕಾರವಿಲ್ಲ. ಜೂ.30ರಿಂದ ಜು.29ರವರೆಗಿನ ಎಸ್‌ಐಆರ್‌ನಲ್ಲಿ ಹೆಸರು ಸೇರಿಸಲು ಆಧಾರ್, ಪಡಿತರ ಚೀಟಿ, ಜನ್ಮದಿನಾಂಕ ದಾಖಲೆ ಕಡ್ಡಾಯ. ಆದರೆ ಬಡವರು ಮತ್ತು ಆದಿವಾಸಿಗಳ ಬಳಿ ಇಂತಹ ದಾಖಲೆಗಳೇ ಇಲ್ಲ. ಜಿಲ್ಲಾಡಳಿತ ತಕ್ಷಣ ವಿಶೇಷ ಶಿಬಿರ ನಡೆಸಿ ಉಚಿತವಾಗಿ ದಾಖಲೆ ಒದಗಿಸಬೇಕು ಎಂದು ಒತ್ತಾಯಿಸಿದರು. ನಂತರ ಪ್ರತಿಭಟನಾಕಾರರು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಸಹನಾ ಎಸ್.ಹಾದಿಮನಿ ಅವರಿಗೆ ಮನವಿ ಸಲ್ಲಿಸಿದರು.

ವರದಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!