ಮಾನ್ವಿ ವಿಧಾನಸಭಾ ಕ್ಷೇತ್ರದ ಮುಂಬರುವ 2028 ರ ಕರ್ನಾಟಕ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಮಾನ್ವಿ ಮತ್ತು ಸಿರವಾರ ವಿಧಾನಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಹಾಗೂ ಬಿಜೆಪಿ ಪಕ್ಷದ ಮೈತ್ರಿಕೂಟದ ಅಧಿಕೃತ ಅಭ್ಯರ್ಥಿಯಾಗಿ ನಾನೇ ಸ್ಪರ್ಧೆ ಮಾಡುತ್ತೇನೆ ಎಂದು ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಕ್ಷೇತ್ರದಲ್ಲಿ ಎಂದಿದ್ದ ಬಿಜೆಪಿಯಲ್ಲಿ ಟಿಕೆಟ್ ಹಂಚಿಕೆಯ ಎಲ್ಲಾ ಗೊಂದಲ ಹಾಗೂ ಊಹಾಪೋಹಗಳಿಗೆ ಅವರೇ ಸಂಪೂರ್ಣ ತೆರೆ ಎಳೆದಿದ್ದಾರೆ ಎಂದು ಪಟ್ಟಣದ ಜೆಡಿಎಸ್ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ದೊರೆ ಅವರು ಮೈತ್ರಿಕೂಟದ ವರಿಷ್ಠರ ನಿರ್ಧಾರದಂತೆ ನಾನೇ ಜಂಟಿ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದರು.
ಕ್ಷೇತ್ರದಲ್ಲಿ ಕಾರ್ಯಕರ್ತರು ಯಾವುದೇ ಗೊಂದಲಗಳಿಗೆ ಕಿವಿಗೊಡದೆ ಒಗ್ಗಟ್ಟಿನಿಂದ ಚುನಾವಣೆ ಕೆಲಸಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷದ ಪ್ರಮುಖ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ಮೈತ್ರಿ ಅಭ್ಯರ್ಥಿಯ ಭವ್ಯ ಗೆಲುವಿಗಾಗಿ ಒಟ್ಟಾಗಿ ಶ್ರಮಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ಮೈತ್ರಿಕೂಟದ ಬಲವರ್ಧನೆಯ ತಳಮಟ್ಟದಿಂದಲೇ ಆರಂಭವಾಗಲಿದೆ ಎಂದು ನಾಯಕರು ಈ ಸಂದರ್ಭದಲ್ಲಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಈರಣ್ಣ ಮರ್ಲಟ್ಟಿ, ಸಿರವಾರ ತಾಲೂಕು ಅಧ್ಯಕ್ಷ
ಟಿ ಮಲ್ಲಿಕಾರ್ಜುನ ಗೌಡ ಬಲ್ಲಟಗಿ ಬಾಷಾ ಸಾಬ್ ಪಿ ರವಿ ಕುಮಾರ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
- ಕರುನಾಡ ಕಂದ ಸುದ್ದಿ




















