ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯಲ್ಲಿ ತಹಸಿಲ್ದಾರರಿಂದ ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪರಿಶೀಲನೆ

ಬಳ್ಳಾರಿ / ಕಂಪ್ಲಿ : ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ವಿಶೇಷ ಸಮಗ್ರ ಪರಿಶೀಲನೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದ್ದು, ಕಂಪ್ಲಿ ಪಟ್ಟಣವೂ ಸೇರಿದಂತೆ ತಾಲ್ಲೂಕಿನಲ್ಲಿ ಮತಗಟ್ಟೆ ಅಧಿಕಾರಿಗಳ ಕಾರ್ಯವನ್ನು ನಿರಂತರವಾಗಿ ಪರಿಶೀಲನೆ ಮಾಡಲಾಗುತ್ತಿದೆ ಹಾಗೂ ಬಿಎಲ್‌ಒಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುತ್ತಿರುವುದನ್ನು ಖಾತ್ರಿ ಪಡಿಸಿಕೊಳ್ಳುತ್ತಿದ್ದೇನೆ ಎಂದು ತಹಸಿಲ್ದಾರರು ಹಾಗೂ ತಾಲ್ಲೂಕಿನ ಸಹಾಯಕ ಮತದಾರರ ನೋಂದಣಾಧಿಕಾರಿ ಜೂಗಲ್ ಮಂಜುನಾಯಕ ತಿಳಿಸಿದರು.
ಪಟ್ಟಣದ ತೆಗ್ಗಿನ ಮಠ ಪ್ರದೇಶದಲ್ಲಿ, ಕೋಟೆ ಪ್ರದೇಶ ಹಾಗೂ ಇತರೆ ಪ್ರದೇಶಗಳಲ್ಲಿ ಮತಗಟ್ಟೆ ಅಧಿಕಾರಿಗಳು ಮನೆ,ಮನೆಗೆ ತೆರಳಿ ಗಣತಿ ನಮೂನೆಗಳನ್ನು ಕೊಡುತ್ತಿರುವುದನ್ನು ಪರಿಶೀಲಿಸಿ ಮಾತನಾಡಿದರು. ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗಾಗಿ ಬಿಎಲ್ ಒಗಳು ಮನೆ ಮನೆಗೆ ತೆರಳಿ ಗಣತಿ ನಮೂನೆ ಕೊಡುತ್ತಿದ್ದಾರೆ. ನೆಟ್ ವರ್ಕ ಸರ್ವರ್ ತೊಂದರೆ ಮೊದಲಾದ ಸಮಸ್ಯೆಗಳನ್ನು ಗಮನಿಸಲಾಗಿದೆ ಎಂದರು.
ಈಗಾಗಲೇ ಮ್ಯಾಪಿಂಗ್ ಆಗಿದ್ದು, ಗಣತಿ ನಮೂನೆ ವಿತರಿಸಿ ಡಿಜಿಟಲೈಜೇಷನ್ ಮಾಡಲಾಗುತ್ತಿದೆ. ಮತಗಟ್ಟೆ ಅಧಿಕಾರಿಗಳ ಕಾರ್ಯವೈಖರಿ ಪರಿಶೀಲಿಸಲಾಗುತ್ತಿದೆ. ಎಸ್ ಐ ಆರ್ ಪ್ರಕ್ರಿಯೆಯನ್ನು
ಯಾವ ಲೋಒದೋಷಗಳು ಇಲ್ಲದಂತೆ ಸುಸೂತ್ರವಾಗಿ ನೆರವೇರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ವಿಚಯ ನಿರ್ವಾಹಕ ಎ.ನಿರಂಜನಮೂರ್ತಿ, ಬಿಎಲ್ ಒ ಗಂಗಮ್ಮ, ದ್ವಿತೀಯ ದರ್ಜೆ ಸಹಾಯಕ ಸುರೇಶ್, ಗ್ರಾಮಾಡಳಿತಾಧಿಕಾರಿ ವಮ್ಮಾರಿ ರಮೇಶ್ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!