ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದ್ವಿಚಕ್ರ ವಾಹನ ಚಲಾಯಿಸಿದ ಕಂಪ್ಲಿಯ ಇಬ್ಬರು ಅಪ್ರಾಪ್ತ ಬಾಲಕರಿಗೆ ಹಾಗೂ ಮಾಲೀಕರಿಗೆ ತಲಾ 25 ಸಾವಿರ ರೂ ದಂಡ

ಬಳ್ಳಾರಿ / ಕಂಪ್ಲಿ: ಪಟ್ಟಣದಲ್ಲಿ ದ್ವಿಚಕ್ರ ವಾಹನ ಚಲಾಯಿಸಿದ ಇಬ್ಬರು ಅಪ್ರಾಪ್ತ ಬಾಲಕರಿಗೆ ಮತ್ತು ದ್ವಿಚಕ್ರ ವಾಹನ ನೀಡಿದ ಇಬ್ಬರು ಮಾಲೀಕರಿಗೆ ನ್ಯಾಯಾಲಯವು ತಲಾ 25 ಸಾವಿರ ರೂ ದಂಡವನ್ನು ವಿಧಿಸಿದ್ದಾರೆ.
ಪಟ್ಟಣದ ಬಸ್ ನಿಲ್ದಾಣದ ಹತ್ತಿರ ಪೊಲೀಸರು ವಾಹನಗಳ ತಪಾಸಣೆ ನಡೆಸುವ ಸಂದರ್ಭದಲ್ಲಿ ಎರಡು ಬೈಕ್ ಗಳನ್ನು ತಡೆದು ನಿಲ್ಲಿಸಿದಾಗ ಈ ದ್ವಿ ಚಕ್ರವಾಹನಗಳನ್ನು ಚಲಾಯಿಸುತ್ತಿರುವುದು ಅಪ್ರಾಪ್ತರೆಂದು ತಿಳಿದು ಬಂದಿದ್ದು, ಈ ಸಂಬಂಧ ಇಂಡಿಯನ್ ಮೋಟರ್ ವೆಹಿಕಲ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದರು.
ಇದರ ಪರಿಣಾಮ ಇಬ್ಬರು ಅಪ್ರಾಪ್ತ ಬಾಲಕರಿಗೆ ದ್ವಿಚಕ್ರ ವಾಹನ ನೀಡಿದ ವಾಹನಗಳ ಮಾಲೀಕರಾದ ಮಲ್ಲಿಕಾರ್ಜುನ ಮತ್ತು ಕುಬೇರ ಎನ್ನುವವರಿಗೆ ಬಳ್ಳಾರಿಯ ಒಂದನೇ ಅಡಿಷನಲ್ ಸಿವಿಲ್ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ತಲಾ 25 ಸಾವಿರ ರೂ. ಗಳ ದಂಡವನ್ನು ವಿಧಿಸಿದೆ.
ಮಕ್ಕಳಿಗೆ ವಾಹನಗಳನ್ನು ನೀಡುವ ಮುನ್ನ ಪಾಲಕರು ಎಚ್ಚರಿಕೆ ವಹಿಸುವುದು ಸೂಕ್ತವಾಗಿದೆ ಪೋಷಕರು ಹಾಗೂ ಪಾಲಕರು ಅಪ್ರಾಪ್ತ ಮಕ್ಕಳಿಗೆ ವಾಹನಗಳನ್ನು ನೀಡುವ ಮುನ್ನ ಹತ್ತು ಸಲ ಯೋಚಿಸಬೇಕು. ಯಾಕೆಂದರೆ ಅಕಸ್ಮಾತ್ ಅಪಘಾತ ಸಂಭವಿಸಿದರೆ ಜೀವಕ್ಕೇ ಅಪಾಯ ಎನ್ನುವುದನ್ನು ಅರಿಯುವುದರ ಜೊತೆಗೆ ಸಾವಿರಾರು ರೂಗಳನ್ನು ದಂಡ ಕಟ್ಟಬೇಕಾಗುತ್ತದೆ, ಈ ಹಿನ್ನೆಲೆಯಲ್ಲಿ ಪಾಲಕರು ಹಾಗೂ ಪೋಷಕರು ಅಪ್ರಾಪ್ತರಿಗೆ ತಮ್ಮ ವಾಹನಗಳನ್ನು ನೀಡುವ ಮುನ್ನ ಹಲವು ಬಾರಿ ಯೋಚಿಸಬೇಕಾಗಿದೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!