ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಜನಪದ ಶಿವಭಜನಾ ಕಲಾವಿದ ಶರಣಪ್ಪ ಹುದ್ದಾರ ಇನ್ನಿಲ್ಲ

ಬಾಗಲಕೋಟೆ-ಮುಧೋಳ : ಪುರಂದರ ದಾಸರ.ಕನಕದಾಸರ . ಹಾಗೂ ತತ್ವಪದಗಳನ್ನು ಭಾವಪೂರ್ಣವಾಗಿ ಭಕ್ತಿ ಶ್ರದ್ಧೆಯಿಂದ ಹಾಡಿ ಕೇಳುಗರನ್ನು ಹಾಡಿ ರಂಜಿಸುತ್ತಿದ್ದ ಮುಧೋಳ ತಾಲೂಕಿನ ಸೋರಗಾಂವ ಹಿರಿಯ ಜನಪದ ಶಿವಭಜನಾ ಕಲಾವಿದ ಶರಣಪ್ಪ ಹುದ್ದಾರ ಅವರು ತಮ್ಮ 75 ರ ಇಳಿವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಕಳೆದ 50 ವಷ೯ಗಳಿಂದ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ರಾಜ್ಯ ಸರ್ಕಾರವು ಮಾಶಾಸನ ನೀಡಿ ಗೌರವಿಸಿತ್ತು.
ಶ್ರೀಮನ್ ನಿಜಗುಣ ಶಿವಯೋಗಿ ರಾಷ್ಟ್ರೀಯ ಪ್ರತಿಷ್ಠಾನ ಗಾನಯೋಗಿ ಶ್ರೀಗುರು ಪಂಚಾಕ್ಷರಿ ತಾಲೂಕು ಕಲಾವಿದರ ಸಂಘ‌ ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತು ಸೇರಿದಂತೆ ಅನೇಕ ಸಂಘ ಸಂಸ್ಥೆಗಳು ಗೌರವಿಸಿದ್ದವು. ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಕನಾ೯ಟಕ ರಾಜ್ಯ ಸರ್ವ ಕಲಾವಿದರ ಸಂಘದ {ಒಕ್ಕೂಟ} ಅಧ್ಯಕ್ಷ ಶರಣಬಸವಶಾಸ್ತ್ರಿಗಳು, ಕಲಾವಿದರಾದ ಮುತ್ತಪ್ಪ ಬನಾಜಗೋಳ, ಮಹಾಂತಯ್ಯ ಹಿರೇಮಠ, ಲೋಕನಾಯಕಿ ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷೆ ಶ್ರೀಮತಿ ಎಲ್ ಶ್ಯಾಮಲಾ, ರುದ್ರಪ್ಪ ಅಡವಿ, ಯಲ್ಲಪ್ಪ ಬನಾಜಗೋಳ ಸೇರಿದಂತೆ ಅನೇಕರು ಸಂತಾಪ ಸೂಚಿಸಿದರು.
ಅಂತ್ಯಕ್ರಿಯೆಯಲ್ಲಿ ಗಣ್ಯರು.ಹಿರಿಯರು ಸೇರಿದಂತೆ ಅಪಾರ ಜನಸ್ತೋಮ ನೆರೆದಿತ್ತು.

  • ಕರುನಾಡ ಕಂದ ಸುದ್ದಿ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!