ಬಳ್ಳಾರಿ / ಕಂಪ್ಲಿ : ಇಂದಿನ ಆಧುನಿಕ ಯುಗದಲ್ಲಿ ಅಪೌಷ್ಠಿಕ ಆಹಾರದಿಂದಾಗಿ ಪ್ರತಿಯೊಬ್ಬರ ದೇಹದಲ್ಲಿ ರೋಗಗಳು ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದೆ. ಆದ್ದರಿಂದ ಜನರು ಹೆಚ್ಚಿನ ಮಟ್ಟದಲ್ಲಿ ಪೌಷ್ಠಿಕ ಆಹಾರ ಸೇವನೆಯ ಜೊತೆಗೆ ಆರೋಗ್ಯದ ಕಡೆಗೆ ಹೆಚ್ಚಿನ ಜಾಗೃತಿವಹಿಸಬೇಕು ಎಂದು ವೈದ್ಯಾಧಿಕಾರಿ ಡಾ.ರವೀಂದ್ರ ಕನಿಕೇರಿ ಹೇಳಿದರು.
ಪಟ್ಟಣದ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯಾ ದಿನಾಚರಣೆ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಜೀವನದಲ್ಲಿ ಆರೋಗ್ಯ ಅತಿಮುಖ್ಯವಾಗಿದೆ. ಮನುಷ್ಯ ಆರೋಗ್ಯವನ್ನು ಸದಾ ಕಾಪಾಡಿಕೊಳ್ಳಬೇಕಾಗಿದೆ. ಇತ್ತೀಚಿನ ದಿನಮಾನದಲ್ಲಿ ಜನಸಂಖ್ಯೆ ಹೆಚ್ಚಾದಂತೆಲ್ಲಾ ಜೀವನವೂ ಕೂಡ ದ್ವಿಗುಣವಾಗುತ್ತದೆ. ಆದರೆ, ಮನುಷ್ಯ ಆರೋಗ್ಯವಂತರಿದ್ದಾಗ ಮಾತ್ರ ಜೀವನ ಸುಂದರವಾಗಿರಲು ಸಾಧ್ಯ ಎಂದರು.
ನಂತರ ಆರೋಗ್ಯಕ್ಕೆ ಸಂಬಂಧಪಟ್ಟಂತೆ ಜನರಿಗೆ ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ವೈದ್ಯರಾದ ಡಾ.ವೀರೇಶ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾ ಸೇರಿದಂತೆ ಆಶಾ ಕಾರ್ಯಕರ್ತೆಯರು ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















