ಇಂದು ಬೀದರ ಜಿಲ್ಲೆಯ ವಿಮಾನ ನಿಲ್ದಾಣದಲ್ಲಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕುರುಬ ಸಮಾಜದ ವತಿಯಿಂದ ಭವ್ಯ ಸ್ವಾಗತ ಕೋರಲಾಯಿತು.
ಈ ಸಂದರ್ಭದಲ್ಲಿ ಕುರುಬ ಸಮಾಜದ ಮುಖಂಡರಾದ ಬಾಲಾಜಿ ಜಬಾಡೆ ಅವರ ನೇತೃತ್ವದಲ್ಲಿ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು ಯತೀಂದ್ರ ಸಿದ್ದರಾಮಯ್ಯ ಅವರನ್ನು ಪುಷ್ಪಗುಚ್ಛ ನೀಡಿ, ಕಂಬಳಿ ಹೊದಿಸಿ ಆತ್ಮೀಯವಾಗಿ ಸ್ವಾಗತಿಸಿದರು.
- ಕರುನಾಡ ಕಂದ ಸುದ್ದಿ




















