ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಪೂಜೆ ಹಾಗೂ ಮಳೆಗಾಗಿ ಪ್ರಾರ್ಥನೆ

ಸಣಾಪುರ ವೀರಭದ್ರೇಶ್ವರ ಸೇರಿದಂತೆ ತಾಲ್ಲೂಕಿನಾದ್ಯಂತ ವಿವಿಧ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಮಳೆಗಾಗಿ ಪ್ರಾರ್ಥನೆ ಜರುಗಿತು.

ಬಳ್ಳಾರಿ / ಕಂಪ್ಲಿ : ಸಣಾಪುರ ಗ್ರಾಮದ ಆರಾಧ್ಯ ದೇವರಾದ ಶ್ರೀ ಉದ್ಭವ ವೀರಭದ್ರೇಶ್ವರ ಸ್ವಾಮಿ ಸೇರಿದಂತೆ ಕಂಪ್ಲಿ ಪಟ್ಟಣ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ದೇವಸ್ಥಾನಗಳಲ್ಲಿ ದೇವರಿಗೆ ವಿವಿಧ ಅಬಿಷೇಕಗಳು, ವಿಶೇಷ ಅಲಂಕಾರಗಳು ಸೇರಿದಂತೆ ಮಹಾಪೂಜೆಗಳು ನಡೆದವಲ್ಲದೆ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಮಳೆಗಾಗಿ ವಿಶೇಷ ಪ್ರಾರ್ಥನೆಗಳು ಶ್ರಧ್ಧೆ,ಭಕ್ತಿ ಸಡಗರ ಸಂಭ್ರಮಗಳಿಂದ ಜರುಗಿದವು.
ಸಣಾಪುರ ಗ್ರಾಮದ ಲಿಂಗರೂಪದ ಶ್ರೀ ಉದ್ಬವ ವೀರಭದ್ರಸ್ವಾಮಿಗೆ ವಿವಿಧ ಅಭಿಷೇಕಗಳು. ಸಹಸ್ರ ಬಿಲ್ವಾರ್ಚನೆ ನಡೆಯಿತು. ಸ್ವಾಮಿಗೆ ಬೆಳ್ಳಿ, ಚಿನ್ನಾಭರಣಗಳಿಂದ ಹಾಗೂ ವಿವಿಧ ಹೂಗಳಿಂದ ಅಲಂಕರಿಸಿ ಮಹಾಮಂಗಳಾರತಿ ಮಾಡಲಾಯಿತು. ದೇಗುಲದ ಆವರಣದಲ್ಲಿ ಸ್ಥಳೀಯರು, ಸೇರಿದಂತೆ ವಿವಿಧ ಗ್ರಾಮಗಳು, ವಿವಿಧ ಜಿಲ್ಲೆಗಳು ಮತ್ತು ಬೇರೆ ಬೇರೆ ರಾಜ್ಯಗಳಿಂದ ಆಗಮಿಸಿದ ಸಕಲ ಸದ್ಭಕ್ತರಿಗೆ ಅನ್ನಸಂತರ್ಪಣೆ ಜರುಗಿತು. ರಾತ್ರಿ ರ್ದೇವಸ್ಥಾನದ ಆವರಣದಲ್ಲಿ ಸ್ವಾಮಿಯ ಕಿರು ರಥೋತ್ಸವ ಹಾಗೂ ಭಜನಾ ಕಾರ್ಯಕ್ರಮಗಳು ಜರುಗಿದ ನಂತರ ರಾತ್ರಿಯೂ ಭಕ್ತರಿಗೆ ಅನ್ನಸಂತರ್ಪಣೆ ನಡೆಯಿತು.
ಪಟ್ಟಣದ ಶ್ರೀಪೇಟೆ ಬಸವೇಶ್ವರ, ಕೂಲಿಕಟ್ಟೆ ಬಸವೇಶ್ವರ,ದೇವಾಂಗ ಸಮಾಜದ ರಾಮಲಿಂಗೇಶ್ವರ, ಐತಿಹಾಸಿಕ ಸೋಮೇಶ್ವರ, ಸಕ್ಕರೆ ಕಾರ್ಖಾನೆಯ ಮುಕ್ತಿ ನಾಥೇಶ್ವರ ಹಾಗೂ ತಾಲ್ಲೂಕಿನ ವಿವಿಧ ಗ್ರಾಮಗಳ ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಜರುಗಿದರೆ, ಕಂಪ್ಲಿ ಕೋಟೆಯ ಐತಿಹಾಸಿಕ ಪಂಪಾಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅನ್ನಸಂತರ್ಪಣೆ ಮತ್ತು ಪಟ್ಟಣದ ವಿನಾಯಕ ನಗರದ ಗೌಸದ್ರ ಮಾರೆಮ್ಮ ದೇವಸ್ಥಾನದಲ್ಲಿ ವಿಶೇಷ ಪೂಜೆ ಮತ್ತು ಅನ್ನಸಂತರ್ಪಣೆ ನಡೆಯಿತು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!