ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (SIR) ಅಂಗವಾಗಿ ಜಾಥಾ

ಮೈಸೂರು ಜಿಲ್ಲೆಯ ಹುಣಸೂರು: ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು ಇಲ್ಲಿನ ಎನ್ಎಸ್ಎಸ್ ಘಟಕದ ವತಿಯಿಂದ ಈ ದಿನ “ವಿಶೇಷ ಸಮಗ್ರ ಮತದಾರ ಪಟ್ಟಿ ಪರಿಷ್ಕರಣೆ (SIR)” ಅಂಗವಾಗಿ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಜಾಥಾ ಅಂಗವಾಗಿ ಎನ್ಎಸ್ಎಸ್ ಸ್ವಯಂ ಸೇವಕಿಯರು ಹಾಗೂ ವಿದ್ಯಾರ್ಥಿಗಳು ಹುಣಸೂರು ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಘೋಷಣೆಗಳನ್ನು ಕೂಗುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ವಿದ್ಯಾರ್ಥಿಗಳು “ನನ್ನ ಮತ, ನನ್ನ ಹಕ್ಕು”,
” SIR ನಲ್ಲಿ ಹೊಸ ಭಾವಚಿತ್ರ ಬದಲಾಯಿಸಬಹುದು”, ” SIR ನನ್ನ ಹಕ್ಕು”,
” SIR ಅಂತರ್ಜಾಲದ ಮೂಲಕವೂ ದಾಖಲಿಸಬಹುದು”,
” ಸಹಕಾರಕ್ಕಾಗಿ BLO ಸಂಪರ್ಕಿಸಿ”,
“ಅನಕ್ಷರಸ್ಥರಿಗೆ ಸಹಾಯ ಮಾಡಿ”, ಹೀಗೆ ಮೊದಲಾದ ಘೋಷಣೆಗಳನ್ನು ಕೂಗಿ ಅರಿವು ಮೂಡಿಸಿದರು.
ಈ ಜಾಥಾ ಕಾರ್ಯಕ್ರಮದಲ್ಲಿ ಪ್ರಭಾರ ಪ್ರಾಂಶುಪಾಲರಾದ ಶ್ರೀ ನಟರಾಜು. ಕೆ.ಎಸ್, ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿಗಳಾದ ಶ್ರೀ ದೇವರಾಜು.ಸಿ, ಉಪನ್ಯಾಸಕರಾದ ಶ್ರೀ ಜಗದೀಶ. ಶ್ರೀ ಸರ್ವೋತ್ತಮ್, ಡಿ. ಟಿ, ಶ್ರೀ ಗಿರೀಶ್. ಹೆಚ್.ಎನ್, ಶ್ರೀ ಚಂದ್ರಕಾಂತ್, ಶ್ರೀಮತಿ ತೇಜಸ್ವಿನಿ, ಶ್ರೀಮತಿ ಕೆ. ಆರ್. ಶೀಲಾ, ಶ್ರೀ ಸುರೇಶ್, ಶಶಿಕುಮಾರ್, ಕೀರ್ತಿಕುಮಾರ್, ದೈಹಿಕ ಉಪನ್ಯಾಸಕರಾದ ಕುಮಾರಿ ಸಲ್ಮಾ ಹಾಗೂ ಎನ್ಎಸ್ಎಸ್ ಸ್ವಯಂ ಸೇವಕಿಯರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿ ಜಾಥಾವನ್ನು ಯಶಸ್ವಿಗೊಳಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!