ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಿಪ್ಪಣ್ಣಪ್ಪ ಕಮಕನೂರ್‌ಗೆ ಸಚಿವ ಸ್ಥಾನ ನೀಡುವಂತೆ ಅಧ್ಯಕ್ಷ ಎಂ.ವಿರೇಶ ಒತ್ತಾಯ

ಬಳ್ಳಾರಿ / ಕಂಪ್ಲಿ : ಕಾಂಗ್ರೆಸ್ ಹೈಕಮಾಂಡ್ ಮತ್ತು ನೂತನ ಸಿಎಂ ಇವರು ಸತತ ಮೂರು ಬಾರಿ ಕರ್ನಾಟಕ ವಿಧಾನ ಪರಿಷತ್ ಸದಸ್ಯರಾಗಿರುವ ಗಂಗಾಮತ ಸಮಾಜದ ತಿಪ್ಪಣ್ಣಪ್ಪ ಕಮಕನೂರು ಇವರಿಗೆ ಸಚಿವ ಸ್ಥಾನ ನೀಡಬೇಕೆಂದು ಮಣ್ಣೂರು ಸುಗೂರು ಗ್ರಾಮದ ಗಂಗಾಪರಮೇಶ್ವರಿ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ಎಂ.ವೀರೇಶ ಒತ್ತಾಯಿಸಿದರು.
ಅವರು ಮಣ್ಣೂರು ಸುಗೂರು ಗ್ರಾಮದಲ್ಲಿ ಗಂಗಾ ಪರಮೇಶ್ವರಿ ದೇವಸ್ಥಾನದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ಮಣ್ಣೂರು ಸುಗೂರು ಸಿರುಗಪ್ಪ ಸೇರಿದಂತೆ ರಾಜ್ಯದಲ್ಲಿ ಸುಮಾರು 40 ರಿಂದ 50 ಲಕ್ಷಕ್ಕೂ ಹೆಚ್ಚು ಗಂಗಾಮತ(ಬೆಸ್ತರ) ಜನಸಂಖ್ಯೆ ಇದ್ದಾರೆ. ಈ ಸಮಾಜವು ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದಿದೆ. ಇಂದಿಗೂ ತಳಮಟ್ಟದಲ್ಲಿರುವ ಈ ಬಲಿಷ್ಠ ಸಮಾಜವು ಪ್ರಗತಿಯ ಪಥದತ್ತ ಮುನ್ನುಗ್ಗಲು, ಸಮಾಜದ ಧ್ವನಿಯಾಗಿ ರಾಜ್ಯ ಮಟ್ಟದಲ್ಲಿ ಕೆಲಸ ನಿರ್ವಹಿಸಲು ರಾಜಕೀಯ ಚತುರನ ಅವಶ್ಯಕತೆ ಇದೆ. ಆದ್ದರಿಂದ ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರುಗೆ ಸಚಿವ ಸ್ಥಾನ ನೀಡಲೇಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಗಂಗಾಮತ ಸಮಾಜದ ಮುಖಂಡರು ದೊಡ್ಡಬಸಪ್ಪ ಬಾರಿಕೇರ ಮಲ್ಲಿಕಾರ್ಜುನ ತಿಪ್ಪೇಶಿ ಕೆ ಶಿವಕಮಾರ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!