ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿದ್ಯಾರ್ಥಿ ದೆಸೆಯಿಂದಲೇ ದುಶ್ಚಟಗಳಿಂದ ದೂರವಿರಿ : ಬಡಿಗೇರ್ ಜಿಲಾನಸಾಬ್

ಬಳ್ಳಾರಿ / ಕಂಪ್ಲಿ : ಪಟ್ಟಣದ ಮಾರುತಿ ನಗರ ವಲಯದ ಸರ್ಕಾರಿ ಷಾಮಿಯಾ ಚಂದ್ ಪದವಿ ಪೂರ್ವ ಕಾಲೇಜ್ ನಲ್ಲಿ ಗುರುವಾರ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಮುಖ್ಯ ಅತಿಥಿಗಳಾಗಿ ಕಾಲೇಜ್ ನ ಪ್ರಾಂಶುಪಾಲರಾದ ಸಿದ್ದಪ್ಪ ಪರಮೇಶ್ವ, ಸಂಪನ್ಮೂಲ ವ್ಯಕ್ತಿ ಜಿಲಾನ್ ಸಾಬ್ ಬಡಿಗೇರ, ಹಾಗೂ ವಲಯದ ಮೇಲ್ವಿಚಾರಕಾರದ ಮಂಜುಳಾ, ವಿದ್ಯಾರ್ಥಿಗಳು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಾಸ್ತವಿಕವಾಗಿ ಮಾತನಾಡಿದ ಪ್ರಾಂಶುಪಾಲರಾದ ಸಿದ್ದೇಶ್ ಪರಮೇಶ್ವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಅವರು ಸಾಮಾಜಿಕ ಆರ್ಥಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು, ವಿದ್ಯಾರ್ಥಿಗಳಿಗೆ ಅನುಕೂಲವಾಗುವ ತರಬೇತಿಗಳನ್ನು ನೀಡುತ್ತಾರೆ. ಇದರ ಸದುಪಯೋಗವನ್ನು ಎಲ್ಲಾ ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ತಿಳಿಸಿದರು

ನಂತರ ಸಂಪನ್ಮೂಲ ವ್ಯಕ್ತಿ ಜಿಲಾನ್ ಸಾಬ್ ಬಡಿಗೇರ್ ಮಾತನಾಡಿ, ಕುಟುಂಬಗಳು ನೆಮ್ಮದಿಯಾಗಿ ಇರಬೇಕೆಂದರೆ ದುಷ್ಟಟಗಳಿಂದ ದೂರವಿರಬೇಕೆಂದು ಉದಾಹರಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ದುಶ್ಚಟಗಳಿಂದ ದೂರವಿರಬೇಕು. ಮೊಬೈಲ್ ಬಳಕೆಯು ಕೂಡ ಒಂದು ದುಶ್ಚಟವಾಗಿ ಪರಿಣಮಿಸಿದ್ದು ಇದನ್ನು ಮಿತ ಬಳಕೆ ಮಾಡಬೇಕೆಂದು ಹಾಗೂ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನವಹಿಸಬೇಕು,
ಶ್ರೀ ಕ್ಷೇತ್ರ ಧರ್ಮಸ್ಥಳದ ಪೂಜ್ಯರು ಹಾಗೂ ಮಾತೃಶ್ರೀ ಅಮ್ಮನವರು ಸಮಾಜಕ್ಕೆ ಅನೇಕ ಕೊಡುಗೆಗಳನ್ನು ನೀಡಿದ್ದು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಬಹುದೊಡ್ಡ ಕೊಡುಗೆಯಾಗಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಸ್ವಾಸ್ಥ್ಯ ಸಂಕಲ್ಪ ಪ್ರತಿಜ್ಞಾವಿಧಿ ಭೋದಿಸಿದರು.

ಈ ಸಂದರ್ಭದಲ್ಲಿ ಸೇವಾ ಪ್ರತಿನಿಧಿಗಳಾದ ಯಶೋದ ಅಮಾಲಾ ಲಕ್ಷ್ಮಿ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!